ಭ್ರೂಣಕ್ಕೂ ಇದೆ ಬದುಕುವ ಹಕ್ಕು: ಗರ್ಭಪಾತಕ್ಕೆ ಅನುಮತಿ ನಿರಾಕರಿಸಿದ ಸುಪ್ರೀಂ ಕೋರ್ಟ್​

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

27 ವಾರಗಳ ಗರ್ಭಣಿ ಗರ್ಭಪಾತ ಮಾಡಿಸಿಕೊಳ್ಳಲು ಅನುಮತಿ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್​ ಬುಧವಾರ ನಿರಾಕರಿಸಿದೆ. ಗರ್ಭದಲ್ಲಿರುವ ಭ್ರೂಣಕ್ಕೂ ಬದುಕುವ ಮೂಲಭೂತ ಹಕ್ಕು ಇದೆ ಎಂದು ಹೇಳಿದೆ.

ಗರ್ಭಪಾತಕ್ಕೆ ಅನುಮತಿ ಕೋರಿ 20 ವರ್ಷದ ಅವಿವಾಹಿತ ಯುವತಿಯು ದೆಹಲಿ ಹೈಕೋರ್ಟಿಗೆ ಅರ್ಜಿ ಸಲ್ಲಿಸಿದ್ದರು. ಹೈಕೋರ್ಟ್​ ತಿರಸ್ಕರಿಸಿತ್ತು. ಇದನ್ನು ಪ್ರಶ್ನಿಸಿ ಯುವತಿ ಸುಪ್ರೀಂ ಕೋರ್ಟ್​ಗೆ ಮೇಲ್ಮನವಿ ಸಲ್ಲಿಸಿದ್ದರು. ಈ ಮನವಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಬಿಆರ್ ಗವಾಯಿ ನೇತೃತ್ವದ ಪೀಠ ಗರ್ಭಪಾತಕ್ಕೆ ಅನುಮತಿ ನಿರಾಕರಿಸಿತ್ತು.

ನ್ಯಾಯಮೂರ್ತಿಗಳಾದ ಎಸ್‌ವಿಎನ್ ಭಟ್ಟಿ ಮತ್ತು ಸಂದೀಪ್ ಮೆಹ್ತಾ ಅವರನ್ನೊಳಗೊಂಡ ನ್ಯಾಯಪೀಠವು ಕಾನೂನಿಗೆ ವಿರುದ್ಧವಾಗಿ ನಾವು ಯಾವುದೇ ಆದೇಶವನ್ನು ನೀಡಲು ಸಾಧ್ಯವಿಲ್ಲ ಎಂದು ತಿಳಿಸಿತು.

ಈ ವೇಳೆ ವೈದ್ಯಕೀಯ ಗರ್ಭಪಾತ ಕಾಯ್ದೆಯ ತಾಯಿಯ ಹಕ್ಕುಗಾಗಿ ಕುರಿತಾಗಿದೆ ಎಂದು ಯುವತಿಯ ಪರ ವಕೀಲರು ನ್ಯಾಯಾಧೀಶರ ಪೀಠದೆದರು ಹೇಳಿದರು. ಇದಕ್ಕೆ ಪ್ರತಿಕ್ರಿಯಿಸಿದ ಪೀಠ ಗರ್ಭ ಏಳು ವಾರದವನ್ನು ಮೀರಿದೆ. ಭ್ರೂಣಕ್ಕೂ ಬದುಕುವ ಹಕ್ಕು ಇದೆ ಎಂದು ಹೇಳಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!