ಮಂಡ್ಯದಲ್ಲಿ ಭ್ರೂಣಲಿಂಗ ಹತ್ಯೆ ಪ್ರಕರಣ ಪತ್ತೆ: ನಾಲ್ವರ ಬಂಧನ

ಹೊಸದಿಗಂತ ವರದಿ,ಮಂಡ್ಯ :

ಮಂಡ್ಯ ಸಮೀಪದ ಆಲೆಮನೆಯೊಂದರಲ್ಲಿ ಭ್ರೂಣಲಿಂಗ ಪತ್ತೆ ಪ್ರಕರಣ ಮಾಸುವ ಮುನ್ನವೇ ಪಾಂಡವಪುರದಲ್ಲಿ ಹೆಣ್ಣು ಭ್ರೂಣ ಹತ್ಯೆ ಪ್ರಕರಣವೊಂದು ಬೆಳಕಿಗೆ ಬಂದಿದೆ.

ಪಟ್ಟಣದ ಆರೋಗ್ಯ ಇಲಾಖೆ ವಸತಿ ಗೃಹದಲ್ಲೇ ಆರೋಗ್ಯ ಇಲಾಖೆ ನೌಕರರೇ ಹೆಣ್ಣು ಭ್ರೂಣ ಹತ್ಯೆ ಪ್ರಕರಣದಲ್ಲಿ ಭಾಗಿಯಾಗಿರುವುದು ಆತಂಕಕ್ಕೆಡೆಮಾಡಿಕೊಟ್ಟಿದೆ.

ಹೆಣ್ಣು ಭ್ರೂಣ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಆಂಬ್ಯುಲ್ಸ್‌ ಚಾಲಕ ಆನಂದ್ (37), ಹೊರಗುತ್ತಿಗೆ ಡಿ-ಗ್ರೂಪ್ ನೌಕರೆ ಅಶ್ವಿನಿ (32), ಆಕೆಯ ತಾಯಿ ಸತ್ಯಮ್ಮ (54), ಹಿಂದೆ ಪಾಂಡವಪುರ ಖಾಸಗಿ ನರ್ಸಿಂಗ್ ಹೋಂನಲ್ಲಿ ಡಿ-ಗ್ರೂಪ್ ನೌಕರೆಯಾಗಿದ್ದ ಗಿರಿಜಮ್ಮ (48) ಬಂಧಿತರಾಗಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!