ಹೊಸದಿಗಂತ ಡಿಜಿಟಲ್ ಡೆಸ್ಕ್:
ಹೆಣ್ಣು ಭ್ರೂಣ ಪತ್ತೆ ಹಾಗೂ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಡ್ಯ ಪೊಲೀಸರು ಆರು ಮಂದಿಯನ್ನು ಅರೆಸ್ಟ್ ಮಾಡಿದ್ದಾರೆ.
ಒಂಟಿ ಮನೆ, ಕಾರಿನಲ್ಲಿ ಸ್ಕ್ಯಾನಿಂಗ್ ಮಾಡುತ್ತಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳು ಒಂದು ಹೆಣ್ಣುಭ್ರೂಣ ಹತ್ಯೆಗೆ 10 ಸಾವಿರದಿಂದ 50 ಸಾವಿರದವರೆಗೂ ಚಾರ್ಜ್ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.
ಮಂಡ್ಯ ಹಾಗೂ ಮೈಸೂರು ಜಿಲ್ಲೆಯಲ್ಲಿ ಆಕ್ಟೀವ್ ಆಗಿದ್ದ ಈ ತಂಡ, ಕಳೆದ ಹಲವು ವರ್ಷಗಳಿಂದ ಕರಾಳದಂಧೆ ನಡೆಸುತ್ತಿತ್ತು. ಆರೋಪಿಗಳು ಪೊಲೀಸ್, ಆರೋಗ್ಯ ಇಲಾಖೆಯ ಕಣ್ತಪ್ಪಿಸಿ ದಂಧೆ ನಡೆಸುತ್ತಿದ್ದರು. ಬನ್ನೂರಿನ ರಾಮಕೃಷ್ಣ, ಗುರು, ಮೈಸೂರಿನ ಸೋಮಶೇಖರ್ ಪಟೇಲ್, ಪಾಂಡವಪುರ ತಾಲೂಕಿನ ಹಿರೇಮರಳಿ ಗ್ರಾಮದ ನವೀನ್, ಹರಳಹಳ್ಳಿಯ ಜಬ್ಬರ್, ಕೆ.ಆರ್. ನಗರದ ಶಂಕರ್ ಬಂಧಿತ ಆರೋಪಿಗಳು. ಬಂಧಿತರಿಂದ ಸ್ಕ್ಸಾನಿಂಗ್ ಮಶೀನ್, ಕಾರುಗಳನ್ನು ವಶಕ್ಕೆ ಪಡೆಯಲಾಗಿದೆ. ಇದುವರೆಗೂ 50ಕ್ಕೂ ಹೆಚ್ಚು ಹೆಣ್ಣುಭ್ರೂಣ ಹತ್ಯೆ ಮಾಡಿರುವುದು ಬಯಲಾಗಿದೆ.
ಆಸ್ಪತ್ರೆಗೆ ಸೋನೋಗ್ರಫಿ ಟೆಸ್ಟ್ ಮಾಡಿಸಿಕೊಳ್ಳಲು ಬರುವವರನ್ನೇ ಈ ಆರೋಪಿಗಳು ಟಾರ್ಗೆಟ್ ಮಾಡುತ್ತಿದ್ದರು. ವಾರದ ಹಿಂದೆ ಕಿಂಗ್ ಪಿನ್ ಅಭಿಷೇಕ್ ಹಾಗೂ ವಿರೇಶ್ ಸೇರಿ 12 ಜನ ಆರೋಪಿಗಳನ್ನ ಪೊಲೀಸರು ಬಂಧಿಸಿದ್ದರು. ಬಳಿಕ ಮತ್ತೆ 6 ಜನರನ್ನು ಬಂಧಿಸಲಾಗಿತ್ತು. ಇದೀಗ ಮತ್ತೆ 6 ಜನರನ್ನು ಬಂಧಿಸಲಾಗಿದೆ.