ಹೊಸದಿಗಂತ ಡಿಜಿಟಲ್ ಡೆಸ್ಕ್:
2026ರ ಸಾರ್ವತ್ರಿಕ ಚುನಾವಣೆಯ ವೇಳೆಗೆ ಕೆಲವೇ ಮುಸ್ಲಿಂ ಶಾಸಕರು ಕಾಂಗ್ರೆಸ್ ನಲ್ಲಿ ಉಳಿಯಲಿದ್ದಾರೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ.
ಕಾಂಗ್ರೆಸ್ಸಿಗರಾದ ರಾಕಿಬುಲ್ ಹುಸೇನ್, ರೆಕಿಬುದ್ದೀನ್ ಅಹ್ಮದ್, ಜಾಕಿರ್ ಹುಸೇನ್ ಸಿಕ್ದರ್, ನೂರುಲ್ ಹುದಾ ಹಾಗೂ ಇನ್ನು ಕೆಲವರು ಪಕ್ಷದಲ್ಲೇ ಉಳಿಯುವುದಾಗಿ ತಿಳಿಸಿದ್ದಾರೆ.
ಇತ್ತೀಚೆಗೆ ಕಾಂಗ್ರೆಸ್ ಕಾರ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿರುವ ರಾಣಾ ಗೋಸ್ವಾಮಿ ಬಿಜೆಪಿಗೆ ಸೇರುತ್ತಾರೆಯೇ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಈ ವಿಷಯದ ಬಗ್ಗೆ ಯಾವುದೇ ಮಾಹಿತಿ ಇಲ್ಲ. ಅವರು ಪ್ರಬಲ ಕಾಂಗ್ರೆಸ್ ನಾಯಕರಾಗಿದ್ದು, ಬಿಜೆಪಿ ಸೇರುವುದನ್ನು ಸ್ವಾಗತಿಸುತ್ತೇನೆ ಎಂದರು.