ಕಟಕ್‌ನಲ್ಲಿ ಭೀಕರ ಅಗ್ನಿ ಅವಘಡ: ಹೊತ್ತಿ ಉರಿದ ಭುವನೇಶ್ವರ-ಹೌರಾ ಜನ್ ಶತಾಬ್ದಿ ಎಕ್ಸ್‌ಪ್ರೆಸ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕಟಕ್‌ನ ರೈಲು ನಿಲ್ದಾಣದಲ್ಲಿ ಭೀಕರ ಅಗ್ನಿ ಅವಘಡ ಸಂಭವಿದೆ. ಜನರು ನೋಡನೋಡುತ್ತಿದ್ದಂತೆಯೇ ಭುವನೇಶ್ವರ-ಹೌರಾ ಜನ್ ಶತಾಬ್ದಿ ಎಕ್ಸ್‌ಪ್ರೆಸ್ ರೈಲಿನಲ್ಲಿ ಬೆಂಕಿ ಹೊತ್ತಿ ಉರಿದಿದೆ.

ತಕ್ಷಣವೇ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿದ್ದು, ಬೆಂಕಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ. ಆದರೆ ಅಗ್ನಿ ಅವಘಡಕ್ಕೆ ಕಾರಣ ಏನು ಎಂದು ತಿಳಿದುಬಂದಿಲ್ಲ. ಇದೀಗ ಬೆಂಕಿ ನಿಯಂತ್ರಣಕ್ಕೆ ಬಂದಿದ್ದು, ರೈಲು ಪ್ರಯಾಣ ಪುನಾರಂಭವಾಗಿದೆ. ಅಗ್ನಿ ಅವಘಡದಲ್ಲಿ ಯಾವುದೇ ಪ್ರಾಣಹಾನಿ ಆಗಿಲ್ಲ.

ಪ್ರಾಥಮಿಕ ಮಾಹಿತಿ ಅನ್ವಯ ಬ್ರೇಕ್ ಬೈಂಡಿಂಗ್ ಸಮಸ್ಯೆಯಿಂದ ಅಗ್ನಿ ಅವಘಡ ಸಂಭವಿಸಿದೆ ಎನ್ನಲಾಗಿದೆ. ಅದೃಷ್ಟವಶಾತ್ ರೈಲು ನಿಲ್ದಾಣದಲ್ಲಿ ನಿಂತಿದ್ದಾಗ ಬೆಂಕಿ ಹೊತ್ತಿದೆ. ತಕ್ಷಣವೇ ಸಿಬ್ಬಂದಿ ಪರಿಸ್ಥಿತಿಯನ್ನು ನಿಭಾಯಿಸಿದ್ದಾರೆ.

ಇದ್ದಕ್ಕಿದ್ದಂತೆಯೇ ಬೆಂಕಿ ಹತ್ತಿತು, ಜೋರಾಗಿ ಬೆಂಕಿ ಉರಿಯಿತು, ಎಲ್ಲರನ್ನೂ ಹೊರಬರುವಂತೆ ಸಿಬ್ಬಂದಿ ಕೂಗಿದರು. ಎಲ್ಲರೂ ಹೊರಗೆ ಬಂದೆವು. ಅರ್ಧ ಗಂಟೆಯಲ್ಲಿ ಬೆಂಕಿಯನ್ನು ನಂದಿಸಿದರು ಎಂದು ಪ್ರಯಾಣಿಕರು ಮಾಹಿತಿ ನೀಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!