ಲಾಸ್‌ ಏಂಜಲೀಸ್‌ನಲ್ಲಿ ಭೀಕರ ಕಾಡ್ಗಿಚ್ಚು: 50 ಶತಕೋಟಿ ಡಾಲರ್‌ ಸಂಪತ್ತು ಬೆಂಕಿಗಾಹುತಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ದಕ್ಷಿಣ ಕ್ಯಾಲಿಫೋರ್ನಿಯಾದ ಆಕರ್ಷಕ ನಗರವಾದ ಲಾಸ್ ಏಂಜಲೀಸ್‌ನಲ್ಲಿ ಭೀಕರ ಕಾಡ್ಗಿಚ್ಚು ಕಾಣಿಸಿಕೊಂಡಿದೆ. ಬೆಂಕಿ ನಿಯಂತ್ರಣಕ್ಕೆ ಬರದ ಕಾರಣ ಕನಿಷ್ಠ ಐವರು ಸಜೀವ ದಹನವಾಗಿದ್ದಾರೆ.

ಸುಮಾರು 15,832 ಹೆಕ್ಟೇರ್ ಪ್ರದೇಶದಲ್ಲಿ ಬೆಂಕಿ ವ್ಯಾಪಿಸಿದ್ದು, 1,000 ಕಟ್ಟಡಗಳು ಸುಟ್ಟು ಕರಕಲಾಗಿವೆ. ಬೆಂಕಿ ಅನಿಯಂತ್ರಿತವಾಗಿರುವುದರಿಂದ ಸುಮಾರು 100,000 ಜನರನ್ನು ಸ್ಥಳಾಂತರಿಸಲಾಗಿದೆ. ಇನ್ನು ಕೆಲವು ಸ್ಥಳಗಳಲ್ಲಿ ಲೆಕ್ಕವಿಲ್ಲದಷ್ಟು ಐಷಾರಾಮಿ ಮನೆಗಳು ಬೆಂಕಿಯ ಅಪಾಯದಲ್ಲಿದೆ ಎಂದು ವರದಿಯಾಗಿದೆ.

ನಿಯಂತ್ರಣ ತಪ್ಪಿದ ಬೆಂಕಿಯನ್ನು ನಂದಿಸಲು ಅಗ್ನಿಶಾಮಕ ದಳದವರು ಕೆಲಸ ಮಾಡುತ್ತಿದ್ದಾರೆ. ಬೆಂಕಿ ನಂದಿಸಲು ಅಗ್ನಿಶಾಮಕ ದಳದವರು ನಡೆಸಿದ ಪ್ರಯತ್ನ ಬಹುತೇಕ ಯಶಸ್ವಿಯಾಗುವ ಸಾಧ್ಯತೆಗಳಿತ್ತು. ಈ ವೇಳೆ ಚಂಡಮಾರುತ ಗಾಳಿ ಬೀಸಿದ್ದರಿಂದ ಬೆಂಕಿ ಕೆನ್ನಾಲಿಗೆ ಮತ್ತಷ್ಟು ವ್ಯಾಪಿಸಿತು ಎಂದು ವರದಿ ಹೇಳಿದೆ.

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!