ಫಿಫಾ ಕಾನೂನುಗಳ ಉಲ್ಲಂಘನೆ: ಭಾರತದ ಫುಟ್ಬಾಲ್‌ ಫೆಡರೇಶನ್‌ ಅಮಾನತು

ಹೊಸದಿಗಂತ ಡಿಜಿಟಲ್‌ ಡಿಜಿಟಲ್‌ ಡೆಸ್ಕ್‌
ಅಖಿಲ ಭಾರತ ಫುಟ್‌ಬಾಲ್ ಫೆಡರೇಶನ್ ((AIFF) ಅನ್ನು ತಕ್ಷಣವೇ ಜಾರಿಗೆ ಬರುವಂತೆ ಅಮಾನತುಗೊಳಿಸಲು ನಿರ್ಧರಿಸಿರುವುದಾಗಿ ಫಿಫಾ ಮಂಗಳವಾರ ಪ್ರಕಟಿಸಿದೆ. ಮತ್ತು ಫಿಫಾ ಕೌನ್ಸಿಲ್‌ನ ಬ್ಯೂರೋ ಈ ನಿರ್ಧಾರವನ್ನು ಸರ್ವಾನುಮತದಿಂದ ತೆಗೆದುಕೊಂಡಿದೆ. ಮೂರನೇ ವ್ಯಕ್ತಿಗಳ ಅನಗತ್ಯ ಪ್ರಭಾವದಿಂದಾಗಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ, ಇದು ಫಿಫಾ ಕಾನೂನುಗಳ ಗಂಭೀರ ಉಲ್ಲಂಘನೆಯಾಗಿದೆ.
“ಫಿಫಾ ಕೌನ್ಸಿಲ್‌ನ ಬ್ಯೂರೋ ಅಖಿಲ ಭಾರತ ಫುಟ್‌ಬಾಲ್ ಫೆಡರೇಶನ್ (ಎಐಎಫ್‌ಎಫ್) ಅನ್ನು ತತ್‌ಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಲು ಸರ್ವಾನುಮತದಿಂದ ನಿರ್ಧರಿಸಿದೆ. ಭಾರತ ಫುಟ್‌ಬಾಲ್ ಫೆಡರೇಶನ್ ನಲ್ಲಿ ಮೂರನೇ ವ್ಯಕ್ತಿಗಳ ʼಅನಗತ್ಯ ಪ್ರಭಾವ ಹೆಚ್ಚಾಗಿದೆ. ಇದು ಇದು ಫಿಫಾ ಕಾನೂನುಗಳ ಗಂಭೀರ ಉಲ್ಲಂಘನೆಯಾಗಿದೆ” ಎಂದು ಫಿಫಾ ಸಂಸ್ಥೆಯ ಅಧಿಕೃತ ಮಾಧ್ಯಮ ಪ್ರಕಟಣೆ ತಿಳಿಸಿದೆ.
ಮಹಿಳಾ ವಿಶ್ವಕಪ್ ಟೂರ್ನಿ ಮೇಲೆ ಕರಿನೆರಳು:
“ಎಐಎಫ್‌ಎಫ್ ಅನ್ನು ಅಮಾನತುಗೊಳಿಸಿರುವುದರಿಂದ ಈ ವರ್ಷದ ಅಕ್ಟೋಬರ್ 11ರಿಂದ 30ರ ವರೆಗೆ ಭಾರತದಲ್ಲಿ ನಡೆಯಲಿರುವ ಫಿಫಾ ಅಂಡರ್-17 ಮಹಿಳಾ ವಿಶ್ವಕಪ್ ಅನ್ನುಭಾರತದಲ್ಲಿ ಯೋಜಿಸಿದಂತೆ ನಡೆಸಲು ಸಾಧ್ಯವಿಲ್ಲ” ಎಂದು ಫಿಫಾ ಹೇಳಿದೆ.
ಪಂದ್ಯಾವಳಿಗೆ ಸಂಬಂಧಿಸಿದಂತೆ FIFA ಮುಂದಿನ ವಿಚಾರಗಳನ್ನು ನಿರ್ಣಯಿಸುತ್ತಿದೆ ಮತ್ತು ಅಗತ್ಯವಿದ್ದರೆ ಮತ್ತು ಕೌನ್ಸಿಲ್‌ನ ಬ್ಯೂರೋ ದೊಂದಿಗೆ ಈ ವಿಚಾರವನ್ನು ಚರ್ಚಿಸಲಾಗುತ್ತಿದೆ ಎಂದರು.
ಫಿಫಾ ಭಾರತದಲ್ಲಿ ಯುವ ವ್ಯವಹಾರಗಳು ಮತ್ತು ಕ್ರೀಡಾ ಸಚಿವಾಲಯದೊಂದಿಗೆ ನಿರಂತರ ಸಂಪರ್ಕದಲ್ಲಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸಕಾರಾತ್ಮಕ ಫಲಿತಾಂಶವನ್ನು ನಿರೀಕ್ಷಿಸಲಾಗಿದೆ ಎಂದು ಫಿಫಾ ಹೇಳಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!