ಫಿಫಾ ವಿಶ್ವಕಪ್ ಸೆಮಿಪೈನಲ್ : ಬೆಂಗಳೂರಿನಲ್ಲಿ ಬಾರ್, ರೆಸ್ಟೊರೆಂಟ್, ಪಬ್ ಅವಧಿ ವಿಸ್ತರಣೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಫಿಫಾ ವಿಶ್ವಕಪ್ ಸೆಮಿಪೈನಲ್ ಹವಾ ದೇಶದಲ್ಲೂ ಬಲುಜೋರಾಗಿದ್ದು, ಈ ಹಿನ್ನೆಲೆ ಬೆಂಗಳೂರಿನಲ್ಲಿ ಬಾರ್ ಅಂಡ್ ರೆಸ್ಟೋರೆಂಟ್, ಪಬ್‌ ಗಳ ಅವಧಿಯನ್ನು ವಿಸ್ತರಣೆ ಮಾಡಲಾಗಿದೆ.
ಡಿಸೆಂಬರ್ 14 ಹಾಗೂ 15 ರಂದು ಬೆಳಗಿನ ಜಾವ 3.30 ರ ತನಕ ತೆರೆಯಲು ಅವಕಾಶ ನೀಡಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಆದೇಶ ಆದೇಶ ಹೊರಡಿಸಿದ್ದಾರೆ.
ಇದುವರೆಗೆ ರಾತ್ರಿ 1 ಗಂಟೆಯವರೆಗೆ ಬಾರ್ ಮತ್ತು ಪಬ್ ತೆರೆಯಲು ಅವಕಾಶ ನೀಡಲಾಗಿತ್ತು.
ಫಿಫಾ ವಿಶ್ವಕಪ್ ಸೆಮಿಫೈನಲ್ ಹಿನ್ನೆಲೆ ಫೆಡರೇಶನ್ ಆಫ್ ಕ್ಲಬ್ಸ್ ಕರ್ನಾಟಕ ವತಿಯಿಂದ ಪೊಲೀಸ್ ಆಯುಕ್ತರಿಗೆ ಸಮಯ ವಿಸ್ತರಣೆಗೆ ಮನವಿ ಮಾಡಲಾಗಿತ್ತು ಇದೀಗ ಪೊಲೀಸ್ ಬೆಳಗಿನ ಜಾವ 3.30 ರವರೆಗೆ ವಿಸ್ತರಣೆ ಮಾಡಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಆದೇಶ ಹೊರಡಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!