Wednesday, July 6, 2022

Latest Posts

ಕೊರೋನಾ ವಿರುದ್ಧ ಹೋರಾಟ: ಐಪಿಎಲ್​ ಸಂಬಳದ ಶೇ.10ರಷ್ಟು ದೇಣಿಗೆ ನೀಡಲು ಮುಂದಾದ ಜಯದೇವ್​ ಉನಾದ್ಕತ್

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
……………………………………………………………………………………. 

ಹೊಸದಿಗಂತ ಆನ್ ಲೈನ್ ಡೆಸ್ಕ್:

ದೇಶದಲ್ಲಿ ಕೊರೋನಾ ಹೆಚ್ಚುತ್ತಿದ್ದು, ಅನೇಕ ಜನರು ತಮ್ಮ ಕೈಲಾದ ಸಹಾಯವನ್ನು ಮಾಡುತ್ತಿದ್ದಾರೆ . ಇದೀಗ ಟೀಂ ಇಂಡಿಯಾ ಬೌಲರ್​ ಜಯದೇವ್​ ಉನಾದ್ಕತ್​ ಕೊರೋನಾ ಹೋರಾಟದಲ್ಲಿ ಕೈಜೋಡಿಸಿದ್ದು, ಐಪಿಎಲ್​ ಸಂಬಳದ ಶೇ.10ರಷ್ಟು ದೇಣಿಗೆ ನೀಡಲು ಮುಂದಾಗಿದ್ದಾರೆ.
ಪ್ರಸಕ್ತ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಉನಾದ್ಕತ್​ ರಾಜಸ್ಥಾನ ರಾಯಲ್ಸ್ ತಂಡದ ಪರ ಆಡುತ್ತಿದ್ದು, ಅವರಿಗೆ 3 ಕೋಟಿ ರೂ. ನೀಡಿ ಖರೀದಿ ಮಾಡಲಾಗಿದೆ. ಇದಕ್ಕೆ ಸಂಬಂಧಿಸಿದಂತೆ ಟ್ವಿಟರ್​​​ನಲ್ಲಿ ವಿಡಿಯೋ ಹರಿಬಿಟ್ಟಿರುವ ಬೌಲರ್​, ವೈರಸ್ ವಿರುದ್ಧದ ಹೋರಾಟದಲ್ಲಿ ಭಾಗಿಯಾಗುವ ಉದ್ದೇಶದಿಂದ ಕೈಲಾದ ಸಹಾಯ ಮಾಡಿದ್ದೇನೆ ಎಂದಿದ್ದಾರೆ.
ಕೋವಿಡ್ ಹೋರಾಟದಲ್ಲಿ ಈಗಾಗಲೇ ನಿಕೂಲಸ್ ಪೂರನ್​, ಪ್ಯಾಟ್​ ಕಮ್ಮಿನ್ಸ್​, ಬ್ರೆಟ್​ ಲೀ ಜೊತೆ ಸಚಿನ್ ತೆಂಡೂಲ್ಕರ್​ ಸಹ ದೇಣಿಗೆ ನೀಡಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss