ಕೊರೋನಾ ವಿರುದ್ಧ ಹೋರಾಟ: ಬುಧವಾರದಿಂದ 12-14 ವರ್ಷದೊಳಗಿನ ಮಕ್ಕಳಿಗೆ ವ್ಯಾಕ್ಸಿನ್!

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಕೊರೋನಾ ವಿರುದ್ಧ ಲಸಿಕಾ ಅಭಿಯಾನದ ಭಾಗವಾಗಿ ಕೇಂದ್ರ ಆರೋಗ್ಯ ಇಲಾಖೆ ಬುಧವಾರದಿಂದ 12 ರಿಂದ 14 ವರ್ಷದ ಮಕ್ಕಳಿಗೆ ಕೋವಿಡ್​ ವ್ಯಾಕ್ಸಿನ್ ನೀಡಲು ನಿರ್ಧರಿಸಿದೆ.
ಈ ಕುರಿತು ಟ್ವಿಟ್ಟರ್ ನಲ್ಲಿ ಮಾಹಿತಿ ಹಂಚಿಕೊಂಡ ಕೇಂದ್ರ ಆರೋಗ್ಯ ಸಚಿವ ಡಾ. ಮನ್ಸುಖ್​ ಮಾಂಡವಿಯಾ, ಮಾರ್ಚ್​​ 16ರಿಂದ 12,13 ಹಾಗೂ 14 ವರ್ಷದೊಳಗಿನ ಎಲ್ಲ ಮಕ್ಕಳಿಗೆ ಕೋವಿಡ್​​ ವ್ಯಾಕ್ಸಿನ್ ನೀಡಲು ನಿರ್ಧರಿಸಲಾಗಿದೆ. ಇದರ ಜೊತೆಗೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಬೂಸ್ಟರ್ ಡೋಸ್ ನೀಡಲಾಗುವುದು ಎಂಬ ಮಾಹಿತಿ ಹಂಚಿಕೊಂಡಿದ್ದಾರೆ.
ಇನ್ನು ಪೋಷಕರು ತಮ್ಮ 12ರಿಂದ 14 ವರ್ಷದ ಮಕ್ಕಳಿಗೆ ಕೋವಿಡ್​ ವ್ಯಾಕ್ಸಿನ್ ಹಾಕಿಸುವಂತೆ ಮನವಿ ಮಾಡಿದ್ದಾರೆ. 14 ವರ್ಷ ಮೇಲ್ಪಟ್ಟ ಎಲ್ಲರಿಗೂ ಈಗಾಗಲೇ ದೇಶಾದ್ಯಂತ ಕೋವಿಡ್ ವ್ಯಾಕ್ಸಿನೇಷನ್ ನೀಡಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!