ಮಂಡ್ಯ ಟಿಕೆಟ್ ಗಾಗಿ ಫೈಟ್: ಬಿಜೆಪಿ ಅಧ್ಯಕ್ಷ ನಡ್ಡಾ ಭೇಟಿಯಾದ ಸಂಸದೆ ಸುಮಲತಾ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮಂಡ್ಯ ಲೋಕಸಭಾ ಕ್ಷೇತ್ರ ಪಡೆಯಲು ಜೆಡಿಎಸ್‌ ಪೈಪೋಟಿ ನಡೆಸುತ್ತಿದ್ದು, ಇದರ ನಡುವೆ   ಸಂಸದೆ ಸುಮಲತಾ ಅಂಬರೀಶ್ ಅವರು ಮಂಡ್ಯ ಕ್ಷೇತ್ರವನ್ನು ಜೆಡಿಎಸ್‌ಗೆ ಬಿಟ್ಟುಕೊಡದೇ, ಬಿಜೆಪಿಗೆ ಉಳಿಸಿಕೊಂಡು ತನಗೆ ಟಿಕೆಟ್ ನೀಡುವಂತೆ ಬಿಜೆಪಿ ಹೈಕಮಾಂಡ್‌ ಬಳಿ ಮನವಿ ಮಾಡಿದ್ದಾರೆ.

ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನಲೆಯಲ್ಲಿ ದೆಹಲಿಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜಯಪ್ರಕಾಶ್ ನಡ್ಡಾ ಹಾಗೂ ಬಿಜೆಪಿ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್‌ ಅವರನ್ನು ಸಂಸದೆ ಸುಮಲತಾ ಅವರು ಭೇಟಿ ಮಾಡಿ ಚರ್ಚೆ ಮಾಡಿದ್ದಾರೆ. ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಜೆಡಿಎಸ್-ಬಿಜೆಪಿ ಮೈತ್ರಿ ಮಾಡಿಕೊಂಡಿದ್ದು, ಕೆಲವು ಕ್ಷೇತ್ರಗಳ ಹಂಚಿಕೆಯ ಬಗ್ಗೆಯೂ ಮಾತುಕತೆ ಮಾಡಲಾಗಿದೆ. ಆದರೆ, ಮಂಡ್ಯ ಕ್ಷೇತ್ರವನ್ನು ಯಾವುದೇ ಕಾರಣಕ್ಕೂ ಜೆಡಿಎಸ್‌ಗೆ ಬಿಟ್ಟುಕೊಡದೇ, ಬಿಜೆಪಿಗೆ ಉಳಿಸಿಕೊಳ್ಳುವಂತೆ ಮನವಿ ಮಾಡಿದ್ದಾರೆ.

ಜೊತೆಗೆ, ಇದೇ ವೇಳೆ ಮಂಡ್ಯ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್‌ ಅನ್ನು ತಮಗೆ ನೀಡುವಂತೆ ವಿನಂತಿ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!