ಟೋಲ್ ವಿಚಾರಕ್ಕೆ ಗಲಾಟೆ: ಯುವಕನ ಜೀವ ತೆಗೆದ ದುಷ್ಕರ್ಮಿಗಳು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಟೋಲ್​ ಪಡೆಯುವ ವಿಚಾರಕ್ಕೆ ಸಿಬ್ಬಂದಿ ಹಾಗೂ ಯುವಕರ ನಡುವೆ ಗಲಾಟೆ ನಡೆದಿದ್ದು, ಈ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ.

ರಾಮನಗರ ‌ತಾಲೂಕಿನ ಶೇಷಗಿರಿಹಳ್ಳಿ‌ ಟೋಲ್ ಪ್ಲಾಜಾ ಬಳಿ ಟೋಲ್​ ಪಡೆಯುವ ವಿಚಾರಕ್ಕೆ ಸಿಬ್ಬಂದಿ ಹಾಗೂ ಕಾರಿನಲ್ಲಿ ಬಂದಿದ್ದ ಯುವಕರ ನಡುವೆ ಗಲಾಟೆ ನಡೆದಿತ್ತು. ಇದನ್ನೇ ಮನಸಿನಲ್ಲಿಟ್ಟುಕೊಂಡಿದ್ದ ಯುವಕರು ಟೋಲ್​ನಲ್ಲಿ ಕೆಲಸ ಮಾಡ್ತಿದ್ದ ಪವನ್​ಕುಮಾರ್​(26) ಅನ್ನು ಹತ್ಯೆ ಮಾಡಿದ್ದಾರೆ.

ಬೆಂಗಳೂರು ದಕ್ಷಿಣ ತಾಲೂಕಿನ ಕರಿಕಲ್ ತಾಂಡ್ಯ ನಿವಾಸಿ ಪವನ್​​ಕುಮಾರ್ ಕೆಲಸ ಮುಗಿಸಿ ಊಟಕ್ಕೆ ಹೋಗುತ್ತಿದ್ದಾಗ ಆತನ ‌ಮೇಲೆ ಹಲ್ಲೆ ಮಾಡಿ ಕೊಲೆ ಮಾಡಲಾಗಿದೆ.

ನಿನ್ನೆ ರಾತ್ರಿ ಹತ್ತು ಗಂಟೆ ಸುಮಾರಿಗೆ ಟೋಲ್ ಬಳಿ ಗಲಾಟೆ ನಡೆದಿತ್ತು. ಬಳಿಕ ರಾತ್ರಿ 12 ಗಂಟೆಗೆ ಕೆಲಸ ಮುಗಿಸಿಕೊಂಡು ಊಟಕ್ಕೆಂದು ಪವನ್ ಹೊರಟ್ಟಿದ್ದ. ಈ ವೇಳೆ ಪವನ್​ನನ್ನು ಹಿಂಬಾಲಿಸಿದ ಯುವಕರು ಆತನ ಮೇಲೆ ಹಾಕಿ ಸ್ಟಿಕ್​ನಿಂದ ಹಲ್ಲೆ ನಡೆಸಿ ಕೊಲೆ ಮಾಡಿ ಪರಾರಿಯಾಗಿದ್ದಾರೆ.

ಬಿಡದಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಪೊಲೀಸರು ಬಂದು ಪರೀಶಿಲಿಸಿದ್ದಾರೆ. ಮೃತ ದೇಹವನ್ನು ಬೆಂಗಳೂರು ರಾಜರಾಜೇಶ್ವರಿ ಆಸ್ಪತ್ರೆಗೆ ರವಾನಿಸಲಾಗಿದೆ. ಇದೀಗ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!