ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಿದ್ದರಾಮಯ್ಯ ಕಾನೂನುಬದ್ಧವಾಗಿ ಹೋರಾಟ ಮಾಡಿ ಕ್ಲೀನ್‌ಚಿಟ್ ಸಿಕ್ಕಿ ಯಶಸ್ವಿಯಾಗಿ ಹೊರಗೆ ಬರಲಿ ಎಂದು ಕೆ.ಎಸ್.ಈಶ್ವರಪ್ಪ ಹೇಳಿಕೆ ನೀಡಿದ್ದಾರೆ.
ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರು ಅನುಮತಿ ನೀಡಿರುವ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರು ಅನುಮತಿ ನೀಡಿದ್ದಾರೆ. ಪ್ರಜಾಪ್ರಭುತ್ವದಲ್ಲಿ ಕಾನೂನಿಗೆ ಗೌರವ ನೀಡಬೇಕು ಎಂದರು.
ನನ್ನ ವಿರುದ್ಧ ಆರೋಪ ಬಂದಾಗ ರಾಜೀನಾಮೆ ನೀಡಿ ತನಿಖೆಗೆ ಸಹಕರಿಸಿದ್ದೆ. ಅವರು ರಾಜೀನಾಮೆ ನೀಡಿ ತನಿಖೆಗೆ ಸಹಕರಿಸುತ್ತಾರೆ ಎಂದು ನಂಬಿದ್ದೇನೆ. ಆದಾಗ್ಯೂ, ಅವರ ಪತ್ನಿ ಎಲ್ಲಿ ಇದರಲ್ಲಿ ಸೇರಿಸಿಬಿಡುತ್ತಾರೋ ಎಂಬ ಅನುಮಾನವಿದೆ. ಪಾಪ ಅವರು ಗೌರಮ್ಮ ರೀತಿ ಇದ್ದವರು. ಅವರ ಮೇಲೆ ಅಂತಹ ಆಪಾದನೆ ಬಾರದೇ ಇರಲಿ ಎಂದು ಬೇಡಿಕೊಳ್ಳುತ್ತೇನೆ ಎಂದರು.