ಹೊಸದಿಗಂತ ಡಿಜಿಟಲ್ ಡೆಸ್ಕ್:
ಐಪಿಎಲ್ ನಲ್ಲಿ ಇಂದು ಮುಂಬೈ ಇಂಡಿಯನ್ಸ್ ಮತ್ತು ಸನ್‌ರೈಸರ್ಸ್ ಹೈದರಾಬಾದ್ ಮುಖಾಮುಖಿಯಾಗುತ್ತಿದ್ದು, ಟಾಸ್ ಗೆದ್ದ ಅ ಪಾಂಡ್ಯ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.
ಡೆಲ್ಲಿ ತಂಡವನ್ನು ಮಣಿಸಿರುವ ಹಾರ್ದಿಕ್ ಪಡೆ, ಆ ಗೆಲುವಿನ ಓಟವನ್ನ ಮುಂದುವರಿಸಿಕೊಂಡು ಹೋಗಲು ಸಿದ್ಧವಾಗಿದೆ. ಮುಂಬೈ ತಂಡವು 6 ಪಂದ್ಯಗಳನ್ನು ಆಡಿದ್ದು, ಎರಡರಲ್ಲಿ ಮಾತ್ರ ಗೆಲುವು ದಾಖಲಿಸಿದೆ. ಮತ್ತೊಂದೆಡೆ, ಸನ್‌ರೈಸರ್ಸ್ ಹೈದರಾಬಾದ್ ತಂಡವು ಸತತ ನಾಲ್ಕು ಸೋಲುಗಳ ನಂತರ ಮತ್ತೆ ಚೇತರಿಸಿಕೊಂಡಿದೆ.
ಸನ್‌ರೈಸರ್ಸ್ ಹೈದರಾಬಾದ್ ಪ್ಲೇಯಿಂಗ್ XI: ಟ್ರಾವಿಸ್ ಹೆಡ್, ಅಭಿಷೇಕ್ ಶರ್ಮಾ, ಇಶಾನ್ ಕಿಶನ್, ನಿತೀಶ್ ಕುಮಾರ್ ರೆಡ್ಡಿ, ಹೆನ್ರಿಚ್ ಕ್ಲಾಸೆನ್ (wk), ಅನಿಕೇತ್ ವರ್ಮಾ, ಪ್ಯಾಟ್ ಕಮಿನ್ಸ್ (ನಾಯಕ), ಹರ್ಷಲ್ ಪಟೇಲ್, ಮೊಹಮ್ಮದ್ ಶಮಿ, ಈಶಾನ್ ಮಾಲಿಂಗ, ಜೀಶನ್ ಅನ್ಸಾರಿ
ಮುಂಬೈ ಇಂಡಿಯನ್ಸ್ ಪ್ಲೇಯಿಂಗ್ XI: ವಿಲ್ ಜಾಕ್ಸ್, ರಿಯಾನ್ ರಿಕಲ್ಟನ್ (WK), ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ (c), ನಮನ್ ಧೀರ್, ಮಿಚೆಲ್ ಸ್ಯಾಂಟ್ನರ್, ದೀಪಕ್ ಚಹಾರ್, ಟ್ರೆಂಟ್ ಬೌಲ್ಟ್, ಜಸ್ಪ್ರೀತ್ ಬುಮ್ರಾ, ಕರ್ಣ್ ಶರ್ಮಾ