ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ಕಾಂಗ್ರೆಸ್ನ ಕೆಲ ಸಚಿವರು ಸಿಎಂ ಸ್ಥಾನದ ಆಕಾಂಕ್ಷೆ ಹೇಳಿಕೆ ನೀಡುತ್ತಿದ್ದಾರೆ. ಈ ಹಿನ್ನಲೆ ಸಚಿವರಿಗೆ ಕಡಿವಾಣ ಹಾಕುವಂತೆ 15ಕ್ಕೂ ಹೆಚ್ಚು ಕಾಂಗ್ರೆಸ್ನ ನಾಯಕರು ಸಂಸದ ಹಾಗೂ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಪತ್ರ ಬರೆದಿದ್ದಾರೆ.
‘ನಾವು ಹೋರಾಡಬೇಕಾಗಿರುವುದು ಬಿಜೆಪಿ-JDS ವಿರುದ್ಧ, ಆದರೆ ಬಿಜೆಪಿ-JDS ವಿರುದ್ಧ ಹೋರಾಡುವುದನ್ನು ಮರೆತಿದ್ದಾರೆ. ಅದರ ಬದಲು ಸಚಿವರಿಂದ ಸಿಎಂ ಸ್ಥಾನದ ಕುರಿತು ದಿನಕ್ಕೊಂದು ಹೇಳಿಕೆ ನೀಡುತ್ತಿದ್ದಾರೆ. ಇದರಿಂದ ಕಾರ್ಯಕರ್ತರು, ಜನರಿಗೆ ನಮ್ಮ ಕಾಂಗ್ರೆಸ್ ಸರ್ಕಾರದ ಮೇಲೆ ನಂಬಿಕೆ ಹೋಗುತ್ತಿದೆ. ಕೂಡಲೇ ಸಚಿವರಿಗೆ ಸೂಚಿಸಿ ಗೊಂದಲಕಾರಿ ಹೇಳಿಕೆಗೆ ಕಡಿವಾಣ ಹಾಕಿ ಎಂದು ರಾಹುಲ್ ಗಾಂಧಿಗೆ ಬಿ.ಎಲ್.ಶಂಕರ್, ವಿ.ಎಸ್.ಉಗ್ರಪ್ಪ, ಬಿ.ಎನ್.ಚಂದ್ರಪ್ಪ, ಎಲ್.ಹನುಮಂತಯ್ಯ, ರಾಣಿ ಸತೀಶ್, ವಿ.ಆರ್.ಸುದರ್ಶನ್, H.M.ರೇವಣ್ಣ, H.D.ಅಮರನಾಥ್, ಸಿ.ಎಸ್.ದ್ವಾರಕನಾಥ್, ಪಿ.ಆರ್.ರಮೇಶ್ ಸೇರಿದಂತೆ ಪ್ರಮುಖ ನಾಯಕರೇ ರಾಹುಲ್ ಅವರಿಗೆ ಪತ್ರ ಬರೆದಿದ್ದಾರೆ.
ಇನ್ನು ಈ ಕುರಿತು ಕಾಂಗ್ರೆಸ್ ವಿಧಾನಪರಿಷತ್ ಸದಸ್ಯರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೂ ಪರಿಷತ್ ಸದಸ್ಯರಾದ ದಿನೇಶ್ ಗೂಳಿಗೌಡ, ಮಂಜುನಾಥ್ ಭಂಡಾರಿ ಸೇರಿ ‘ಸಿಎಂ ಕುರ್ಚಿ ಬಗ್ಗೆ ಬಹಿರಂಗವಾಗಿ ಹೇಳಿಕೆ ನೀಡುವುದನ್ನು ನಿಲ್ಲಿಸುವಂತೆ ನಿರ್ದೇಶನ ನೀಡಿ ಎಂದು ಖರ್ಗೆ ಅವರಿಗೆ ಪತ್ರ ಬರೆದಿದ್ದರು.