ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಹುಲ್ ಗಾಂಧಿ ಅವರನ್ನು ಅನರ್ಹಗೊಳಿಸಿರುವುದನ್ನು ಖಂಡಿಸಿ ಕಾಂಗ್ರೆಸ್ ಇಂದು ಗಾಂಧಿ ಪ್ರತಿಮೆಗಳ ಮುಂದೆ ಸಂಕಲ್ಪ ಸತ್ಯಾಗ್ರಹ ನಡೆಸುತ್ತಿದೆ.
ಇದರ ಭಾಗವಾಗಿ ದೆಹಲಿಯ ರಾಜ್‌ಘಾಟ್‌ನಲ್ಲಿ ಮಾತನಾಡಿದ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ, ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ನನ್ನ ವಿರುದ್ಧ ಕೇಸು ದಾಖಲಿಸಿ, ನನ್ನನ್ನು ಜೈಲಿಗೆ ಹಾಕಿ, ಆದರೆ ಭಾರತದ ಪ್ರಧಾನಿ ಒಬ್ಬ ಹೇಡಿ ಎಂದುಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನಿರಾಕರಿಸಿದ್ದರೂ, ಮಲ್ಲಿಕಾರ್ಜುನ ಖರ್ಗೆ ಮತ್ತು ಪ್ರಿಯಾಂಕಾ ಗಾಂಧಿ ಒಂದು ದಿನದ ಸತ್ಯಾಗ್ರಹ ಮಾಡುತ್ತಿದ್ದಾರೆ. ಬಿಜೆಪಿಯ ದಾಳಿಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವ ವಹಿಸಿದ್ದಾರೆ ಮತ್ತು ಅವರ ಕಾಶ್ಮೀರಿ ಪಂಡಿತ ವಂಶಾವಳಿಯನ್ನು ಅವಮಾನಿಸಿದ್ದಾರೆ ಎಂದು ಪ್ರಿಯಾಂಕಾ ಗಾಂಧಿ ವಾದ್ರಾ ಮತ್ತು ಮಲ್ಲಿಕಾರ್ಜುನ ಖರ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ವೇಳೆ ರಾಹುಲ್ ಗಾಂಧಿಯನ್ನು ಹುತಾತ್ಮನ ಮಗ ಎಂದು ಕರೆದಿರುವ ಪ್ರಿಯಾಂಕಾ ಗಾಂಧಿ ವಾದ್ರಾ, ನೆಹರು-ಗಾಂಧಿ ಕುಟುಂಬವನ್ನು ಸಹ ಬಿಡದೆ ಬಿಜೆಪಿ ಪ್ರತಿದಿನ ರಾಹುಲ್‌ನನ್ನು ಅವಮಾನಿಸುತ್ತಿದೆ ಎಂದು ಹೇಳಿದರು.
ನನ್ನ ಸಹೋದರನನ್ನು ಹುತಾತ್ಮನ ಮಗ, ದೇಶದ್ರೋಹಿ ಮತ್ತು ಮೀರ್ ಜಾಫರ್ ಎಂದು ಕರೆಯುತ್ತೀರಿ, ನೀವು ಅವರ ತಾಯಿಯನ್ನು ಅವಮಾನಿಸುತ್ತೀರಿ. ನಿಮ್ಮ ಮುಖ್ಯಮಂತ್ರಿ ರಾಹುಲ್ ಗಾಂಧಿಗೆ ಅವರ ತಾಯಿ ಯಾರೆಂದು ಗೊತ್ತಿಲ್ಲ ಎಂದು ಹೇಳುತ್ತಾರೆ. ಹೀಗೆ, ನೀವು ನನ್ನ ಕುಟುಂಬವನ್ನು ಪ್ರತಿದಿನ ಅವಮಾನಿಸುತ್ತೀರಿ. ಆದರೆ ಯಾವುದೇ ಪ್ರಕರಣಗಳನ್ನು ದಾಖಲಿಸುವುದಿಲ್ಲ’’ಎಂದು ಆಕ್ರೋಶ ವ್ಯಕ್ತಡಿಸಿದ್ದಾರೆ.