ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ದೂರು ದಾಖಲು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಸಚಿವ ದಿನೇಶ್ ಗುಂಡೂರಾವ್(Dinesh Gundu Rao) ಮನೆಯಲ್ಲಿ ಅರ್ಧ ಪಾಕಿಸ್ತಾನ ಇದೆ ಎಂದು ಹೇಳಿಕೆ ನೀಡಿದ್ದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಬೆಂಗಳೂರಿನ ಶೇಷಾದ್ರಿಪುರಂ ಪೊಲೀಸ್ ಠಾಣೆಯಲ್ಲಿ ಗಾಂಧಿನಗರ ಬ್ಲಾಕ್ ಕಾಂಗ್ರೆಸ್ ವತಿಯಿಂದ ದೂರು ದಾಖಲಿಸಲಾಗಿದೆ.

ಸಚಿವ ದಿನೇಶ್ ಗುಂಡೂರಾವ್ ಅವರ ಕುಟುಂಬಸ್ಥರನ್ನು ಅವಮಾನಿಸಿದ್ದಾರೆ. ಚುನಾವಣೆ ಹೊತ್ತಲ್ಲಿ‌ ಕೋಮು ಸೌಹಾರ್ದತೆ ಹಾಳು ಮಾಡಲು ಈ ರೀತಿ ಮಾತಾಡುತ್ತಿದ್ದಾರೆ. ಇದೊಂದು ‌ದೇಶ ವಿರೋಧಿ ಹೇಳಿಕೆ ಎಂದು ದೂರಿನಲ್ಲಿ ದಾಖಲಿಸಲಾಗಿದೆ.

ವಿಜಯಪುರ ಜಿಲ್ಲಾ ಬಿಜೆಪಿ ಕಚೇರಿ ಬಳಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ‘ರಾಮೇಶ್ವರ ಕೆಫೆ ಬಾಂಬ್ ಬ್ಲಾಸ್ಟ್ ಕೇಸ್​ನಲ್ಲಿ ಬಿಜೆಪಿ ಕಾರ್ಯಕರ್ತ ವಿಚಾರಣೆ ನಡೆಸಿದ್ದ ಎನ್​ಐಎ ವಿಚಾರಕ್ಕೆ ಸಂಬಂಧಿಸಿದಂತೆ ಮಾತಾನಾಡುವಾಗ ದಿನೇಶ್ ಗುಂಡೂರಾವ್ ಕುಟುಂಬದ ಬಗ್ಗೆ ಮಾತಾಡಿದ್ದರು. ಈ ವೇಳೆ ಸಚಿವರ ಮನೆಯಲ್ಲಿ ಅರ್ಧ ಪಾಕಿಸ್ತಾನ ಇದೆ ಎಂದಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!