ಮೈಕ್ರೋ ಫೈನಾನ್ಸ್ ಕಿರುಕುಳ ನೀಡಿದ್ರೆ ಕ್ರಿಮಿನಲ್ ಕೇಸ್ ಹಾಕಿ: ಜಿಲ್ಲಾಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡ ಸೂಚನೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮೈಕ್ರೋ ಫೈನಾನ್ಸ್ ಕಿರುಕುಳ ನೀಡುವುದು ಕಂಡುಬಂದರೆ ಕ್ರಿಮಿನಲ್ ಪ್ರಕರಣ ದಾಖಲಿಸಿ ಎಂದು ಎಲ್ಲಾ ಜಿಲ್ಲಾಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ವಿಕಾಸಸೌಧದಲ್ಲಿ ಸೋಮವಾರ ಜಿಲ್ಲಾಧಿಕಾರಿಗಳ ಮಾಸಿಕ ಪ್ರಗತಿ ಪರಿಶೀಲನಾ ಸಭೆಯ ನಂತರ ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡಿದ ಅವರು, “ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಂಪೆನಿಗಳು 59 ಸಾವಿರ ಕೋಟಿ ರೂ. ಸಾಲ ನೀಡಿವೆ. ಅಲ್ಲದೆ, ತಮ್ಮ ಸಾಮರ್ಥ್ಯ ವಿಸ್ತರಿಸಿಕೊಳ್ಳುವ ಸಲುವಾಗಿ ಆರ್ ಬಿಐ ಗೈಡ್ಲೈನ್ಸ್ ಉಲ್ಲಂಘಿಸಿ ಸಾಲ ನೀಡುತ್ತಿವೆ. ಸಾಲ ನೀಡುವಾಗ ಸಾಲ ಪಡೆದವರ ಆರ್ಥಿಕ ಸಾಮರ್ಥ್ಯವನ್ನು ಕಡೆಗಣಿಸಲಾಗುತ್ತಿರುವುದು ಅಹಿತಕರ ಪ್ರಸಂಗಗಳಿಗೆ ಕಾರಣವಾಗುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದರು.

ಓರ್ವ ವ್ಯಕ್ತಿಗೆ 2ಲಕ್ಷಕ್ಕಿಂತ ಹೆಚ್ಚು ಸಾಲ ನೀಡಬಾರದು ಎಂದು ಆರ್ ಬಿಐ ಗೈಡ್ಲೈನ್ಸ್ ಇದೆ. ಇದನ್ನು ಯಾರೂ ಅನುಸರಿಸುತ್ತಿಲ್ಲ. ಓರ್ವ ವ್ಯಕ್ತಿಗೆ 5-6 ಲಕ್ಷ ರೂ. ಸಾಲ ನೀಡಲಾಗುತ್ತಿದೆ. ಈ ಮೂಲಕ ಬಡವರನ್ನು ಸಾಲದ ಸುಳಿಗೆ ಸಿಲುಕಿಸಲಾಗುತ್ತಿದೆ. ಸಾಲ ಮರುಪಾವತಿ ಮಾಡದಿದ್ದರೆ ಮೈಕ್ರೋ ಫೈನಾನ್ಸ್ ಕಂಪೆನಿಗಳ ಅಸ್ಥಿತ್ವಕ್ಕೂ ತೊಂದರೆಯಾಗಲಿದೆ. ಹೀಗಾಗಿ ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ಮುಖ್ಯಾಧಿಕಾರಿಗಳು ಈ ವಾರದೊಳಗೆ ಮೈಕ್ರೋ ಫೈನಾನ್ಸ್ ಕಂಪನಿಗಳ ಮುಖ್ಯಸ್ಥರ ಜೊತೆಗೆ ಸಭೆ ನಡೆಸಿ ಸಾಲ ವಸೂಲಾತಿಗೆ ಆರ್ಬಿಐ ನಿಗದಿಪಡಿಸಿರುವ ಮಾದರಿ ಕಾರ್ಯಾಚರಣೆಯನ್ನು ಪಾಲನೆ ಮಾಡಲು ಹಾಗೂ ಬೇಜಾಬ್ದಾರಿಯಿಂದ ಸಾಲ ನೀಡುವುದನ್ನೂ ನಿಗ್ರಹಿಸಲು ಸೂಚಿಸಲಾಗಿದೆ ಎಂದರು.

ಮೈಕ್ರೋ ಫೈನಾನ್ಸ್ ಕಂಪೆನಿಗಳ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಲು ಜಿಲ್ಲಾಧಿಕಾರಿಗಳಿಗೆ ಕೇಂದ್ರ ಸರ್ಕಾರ ಯಾವುದೇ ವಿಶೇಷ ಅಧಿಕಾರ ನೀಡಿಲ್ಲ. ಆದರೆ, ರಾಜ್ಯ ಸರ್ಕಾರವೇ ತನ್ನ ಅಧಿಕಾರದ ಮಿತಿಯಲ್ಲಿ ಬೇರೆ ಬೇರೆ ಕಾನೂನುಗಳ ಮೂಲಕ ಮೈಕ್ರೋ ಫೈನಾನ್ಸ್ಗಳ ಅಕ್ರಮಗಳಿಗೆ ಕಡಿವಾಣ ಹಾಕಲಿದೆ ಎಂದು ತಿಳಿಸಿದರು.

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

1 COMMENT

  1. ಇವರ ಚಮಚಾಗಳನ್ನು ಬಿಟ್ಟು ಉಳಿದ ಎಲ್ಲರಿಗೂ ಕೇಸ್ ದಾಖಲಿಸಿ. ನಿಮ್ಮ ಬೊಕ್ಕಸಕ್ಕೆ ಕಪ್ಪ ಕಾಣಿಕೆ ಕೊಟ್ಟರೆ ಬಿಟ್ಟು ಬಿಡಿ.

LEAVE A REPLY

Please enter your comment!
Please enter your name here

error: Content is protected !!