ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಾಜಿ ಸಚಿವ, ರಾಜರಾಜೇಶ್ವರಿ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ ಸಂಕಷ್ಟ ಎದುರಾಗಿದೆ. ಸ್ಫೋಟಕ ಕಾಯಿದೆ ಮತ್ತು ಕರ್ನಾಟಕ ಭೂಕಂದಾಯ ಕಾಯಿದೆಯಡಿ ಅವರ ವಿರುದ್ಧ ಪ್ರಕರಣ ದಾಖಲಾಗಿದೆ.
ನಗರದ ಹೊರವಲಯದ ಹುಣಸಮಾರನಹಳ್ಳಿಯ ಕ್ವಾರಿಯಲ್ಲಿ ಕಲ್ಲು ಗಣಿಗಾರಿಕೆ ನಡೆಸಲು ಜಿಲೆಟಿನ್ ಸ್ಫೋಟ ನಡೆಸಿದ ಆರೋಪದಡಿ ಎಫ್‌ಐಆರ್ ದಾಖಲಿಸಲಾಗಿದೆ.
ಯಲಹಂಕ ತಹಸೀಲ್ದಾರ್ ಅನಿಲ್ ಅರೋಲಿಕರ್ ನೀಡಿದ ದೂರಿನ ಮೇರೆಗೆ ಚಿಕ್ಕಜಾಲ ಪೊಲೀಸರು ಮುನಿರತ್ನ ಅವರಲ್ಲದೆ ಆನಂದನ್, ಗಣೇಶ್ ವಿ ಮತ್ತು ರಾಧಮ್ಮ ಎಂಬವರ ವಿರುದ್ಧವೂ ಪ್ರಕರಣ ದಾಖಲಿಸಿಕೊಂಡಿದ್ದಾರೆ.
‘ಅಕ್ರಮ’ ಗಣಿಗಾರಿಕೆ ಚಟುವಟಿಕೆಗಳನ್ನು ನಿಲ್ಲಿಸುವಂತೆ ಜೈ ಭೀಮ್ ಸೇನೆಯು ತಹಸೀಲ್ದಾರ್‌ಗೆ ಮನವಿ ಮಾಡಿದೆ ಎಂದು ಎಫ್‌ಐಆರ್‌ನಲ್ಲಿ ತಿಳಿಸಲಾಗಿದೆ.