ಆರೋಗ್ಯ ಸೇವಕರ ಮೇಲೆ ದಾಳಿ ನಡೆದರೆ ಆರು ಗಂಟೆಗಳ ಒಳಗೆ ಎಫ್​ಐಆರ್ ದಾಖಲಿಸಿ: ಕೇಂದ್ರ ಸರಕಾರ ಆದೇಶ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಆರೋಗ್ಯ ಸೇವಕರ ಮೇಲೆ ದಾಳಿ ನಡೆದರೆ ಆರು ಗಂಟೆಗಳ ಒಳಗೆ ಪೊಲೀಸ್ ದೂರುಗಳನ್ನು ದಾಖಲಿಸುವಂತೆ ಕೇಂದ್ರ ಆರೋಗ್ಯ ಸಚಿವಾಲಯವು ಎಲ್ಲಾ ಸರ್ಕಾರಿ ಆಸ್ಪತ್ರೆಗಳಿಗೆ ಆದೇಶಿಸಿದೆ.

ನಿಗದಿತ ಸಮಯದೊಳಗೆ ಅಂತಹ ಯಾವುದೇ ದೂರು ನೀಡದಿದ್ದರೆ ಸಂಬಂಧಪಟ್ಟ ಸಂಸ್ಥೆಯ ಮುಖ್ಯಸ್ಥರನ್ನು ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಶುಕ್ರವಾರ ಹೊರಡಿಸಲಾದ ನೋಟಿಸ್ ನಲ್ಲಿ ತಿಳಿಸಲಾಗಿದೆ.

ಇತ್ತೀಚೆಗೆ ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯರು ಮತ್ತು ಇತರ ಆರೋಗ್ಯ ಸಿಬ್ಬಂದಿಯ ವಿರುದ್ಧದ ದಾಳಿಗಳು ಸಾಮಾನ್ಯವಾಗಿದೆ. ಹಲವಾರು ಆರೋಗ್ಯ ಕಾರ್ಯಕರ್ತರು ತಮ್ಮ ಕರ್ತವ್ಯದ ಸಮಯದಲ್ಲಿ ದೈಹಿಕ ಹಿಂಸೆ ಅನುಭವಿಸಿದ್ದಾರೆ. ಅನೇಕರು ಬೆದರಿಕೆಗೆ ಒಳಗಾಗಿದ್ದಾರೆ. ಅಥವಾ ಮೌಖಿಕ ಆಕ್ರಮಣಕ್ಕೆ ಒಳಗಾಗುತ್ತಿದ್ದಾರೆ ಎಂದು ಹೇಳಿದ್ದಾರೆ ಎಂದು ನಿರ್ದೇಶನದಲ್ಲಿ ತಿಳಿಸಲಾಗಿದೆ.

ಈ ದಾಳಿಯನ್ನು ಬಹುತೇಕ ಸಂದರ್ಭಗಳಲ್ಲಿ ರೋಗಿಗಳು ಅಥವಾ ರೋಗಿಗಳ ಸಂಬಂಧಿಕರು ಮಾಡುತ್ತಾರೆ. ಇದನ್ನು ಗಮನದಲ್ಲಿಟ್ಟುಕೊಂಡು ಕರ್ತವ್ಯದಲ್ಲಿರುವಾಗ ಯಾವುದೇ ಆರೋಗ್ಯ ಕಾರ್ಯಕರ್ತರ ವಿರುದ್ಧ ಯಾವುದೇ ಹಿಂಸಾಚಾರ ನಡೆದರೆ ಸಂಸ್ಥೆಯ ಮುಖ್ಯಸ್ಥರು ಗರಿಷ್ಠ ಆರು ಗಂಟೆಗಳ ಒಳಗೆ ಎಫ್ಐಆರ್ ದಾಖಲಿಸಲು ಜವಾಬ್ದಾರರಾಗಿರುತ್ತಾರೆ ಎಂದು ನೋಟಿಸ್​ನಲ್ಲಿ ಹೇಳಲಾಗಿದೆ.

ಕೋಲ್ಕತಾದ ಆರ್​ಜಿ ಕಾರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ವೈದ್ಯೆಯ ಅತ್ಯಾಚಾರ ಮತ್ತು ಕೊಲೆಯ ಬಗ್ಗೆ ರಾಷ್ಟ್ರವ್ಯಾಪಿ ತೀವ್ರ ಪ್ರತಿಭಟನೆಗಳ ಮಧ್ಯೆ ಈ ನೋಟಿಸ್ ಹೊರಡಿಸಲಾಗಿದೆ..

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!