Friday, September 22, 2023

Latest Posts

ಉದಯ್‌ನಿಧಿ ಸ್ಟಾಲಿನ್ ವಿರುದ್ಧ ಎಫ್‌ಐಆರ್ ದಾಖಲಿಸಿ: ಚೆನ್ನೈ ಪೊಲೀಸರಿಗೆ ಲೀಗಲ್ ನೋಟಿಸ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ತಮಿಳುನಾಡು ಸಚಿವ ಉದಯ್‌ನಿಧಿ ಸ್ಟಾಲಿನ್ (Udhayanidhi Stalin) ವಿರುದ್ಧ ಸ್ವಯಂ ಪ್ರೇರಿತ ಎಫ್‌ಐಆರ್ ದಾಖಲಿಸಿಕೊಳ್ಳುವಂತೆ ಸೋಮವಾರ ಚೆನ್ನೈನ ಪೊಲೀಸ್ (Chennai Police) ಕಮಿಷನರ್‌ಗೆ ಕಾನೂನು ಹಕ್ಕುಗಳ ವೀಕ್ಷಣಾಲಯ (Legal Rights Observatory) ಲೀಗಲ್ ನೋಟಿಸ್ ಕಳುಹಿಸಿದೆ.

ಉದಯ್‌ನಿಧಿ ಸ್ಟಾಲಿನ್ ಅವರ ಹೇಳಿಕೆ ದ್ವೇಷ ಭಾಷಣದ ಒಂದು ಭಾಗವಾಗಿದೆ. ಅವರ ಹೇಳಿಕೆ ಧರ್ಮದ ನೆಲೆಯಲ್ಲಿ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವ ಗುರಿಯನ್ನು ಹೊಂದಿದೆ. ಅವರು ಕಾರ್ಯಕ್ರಮದಲ್ಲಿ ಇಂತಹ ದ್ವೇಷದ ಭಾಷಣವನ್ನು ಮಾಡಿದ್ದು ಮಾತ್ರವಲ್ಲದೆ ಎಕ್ಸ್‌ನಲ್ಲಿಯೂ (Twitter) ಬರೆಯುವ ಮೂಲಕ ಪುನರುಚ್ಚರಿಸಿದ್ದಾರೆ ಎಂದು ಎಲ್‌ಆರ್‌ಒ ಚೆನ್ನೈ ಪೊಲೀಸರಿಗೆ ಲೀಗಲ್ ನೋಟಿಸ್‌ನಲ್ಲಿ ತಿಳಿಸಿದೆ.

ಉದಯ್‌ನಿಧಿ ಸ್ಟಾಲಿನ್ ತನ್ನ ದ್ವೇಷ ಭಾಷಣದ ಮೂಲಕ ಭಾರತೀಯ ದಂಡಸಂಹಿತೆಯ ಸೆಕ್ಷನ್ 153 ಎ ಮತ್ತು ಬಿ, 295 ಎ, 298 ಮತ್ತು 505 ರ ಅಡಿಯಲ್ಲಿ ಅಪರಾಧಗಳನ್ನು ಎಸಗಿದ್ದಾರೆ. ಇದು ಅತ್ಯಂತ ಗಂಭೀರ ಸ್ವಭಾವದ್ದಾಗಿದೆ ಎಂದು ಹೇಳಿದೆ.

ಪ್ರಕರಣದಲ್ಲಿ ಆರೋಪಿಯ ಸ್ಥಿತಿಯನ್ನು ಲೆಕ್ಕಿಸದೇ ಪೊಲೀಸರು ಸ್ವಯಂ ದೂರು ದಾಖಲಿಸಿಕೊಳ್ಳಬಹುದು. ಹಾಗೂ ಯಾವುದೇ ದೂರಿಗೆ ಕಾಯುವ ಅಗತ್ಯವಿಲ್ಲ. ಸುಪ್ರೀಂ ಕೋರ್ಟ್‌ನ ಈ ನಿರ್ದೇಶನದಂತೆ ದ್ವೇಷಪೂರಿತ ಭಾಷಣ ಮಾಡಿದ ಆರೋಪಿ ಉದಯ್‌ನಿಧಿ ಸ್ಟಾಲಿನ್ ವಿರುದ್ಧ ತ್ವರಿತವಾಗಿ ಕ್ರಮವನ್ನು ತೆಗೆದುಕೊಳ್ಳಬೇಕು ಎಂದು ಚೆನ್ನೈ ಪೊಲೀಸ್ ಆಯುಕ್ತರಿಗೆ ಲೀಗಲ್ ನೋಟಿಸ್‌ನಲ್ಲಿ ತಿಳಿಸಲಾಗಿದೆ.

ಒಂದು ವಾರದೊಳಗಾಗಿ ಉದಯ್ ಸ್ಟಾಲಿನ್ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!