ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ.
ಉದ್ಯಮಿ ವಿಜಯ್ ಟಾಟಾ ದೂರಿನನ್ವಯ ಅಮೃತಹಳ್ಳಿ ಪೊಲೀಸರು ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ರಿಯಲ್ ಎಸ್ಟೇಟ್ ಉದ್ಯಮಿ ವಿಜಯ್ ಟಾಟಾ ಬಳಿ ಹೆಚ್.ಡಿ.ಕುಮಾರಸ್ವಾಮಿ 50 ಕೋಟಿ ರೂಪಾಯಿ ಹಣಕ್ಕೆ ಬೇಡಿಕೆಯಿಟ್ಟ ಆರೋಪದಲ್ಲಿ ಎಫ್‌ಐಆರ್ ದಾಖಲಾಗಿದೆ.
ಪ್ರಕರಣದಲ್ಲಿ ರಮೇಶ್ಗೌಡ ಎ1 ಆರೋಪಿಯಾಗಿದ್ದು, ಹೆಚ್.ಡಿ.ಕುಮಾರಸ್ವಾಮಿ ಎ2 ಆರೋಪಿಯಾಗಿದ್ದಾರೆ. ಬಿಎನ್ಎಸ್ ಸೆಕ್ಷನ್ 3(05), 308(02), 351(02) ಅಡಿಯಲ್ಲಿ ಎಫ್‌ಐಆರ್ ದಾಖಲಾಗಿದೆ.
ಈ ಸಂಬಂಧ ಬೆಂಗಳೂರಿನ ಅಮೃತಹಳ್ಳಿ ಠಾಣೆಯಲ್ಲಿ ಎನ್ ಸಿ ಆರ್ ದಾಖಲಾಗಿತ್ತು. ಬಳಿಕ ಎಫ್‌ಐಆರ್ ದಾಖಲಿಸಲಾಗಿದೆ.