ಹೊಸದಿಗಂತ ಡಿಜಿಟಲ್ ಡೆಸ್ಕ್:
ಚುನಾವಣಾ ಆಯೋಗವು ಈಗಾಗಲೇ ಲೋಕಸಭೆ ಚುನಾವಣೆಯ ದಿನಾಂಕವನ್ನು ಪ್ರಕಟಿಸಿದೆ. ದೇಶಾದ್ಯಂತ ಏಳು ಹಂತಗಳಲ್ಲಿ ಮತದಾನ ನಡೆಯಲಿದೆ. 18ನೇ ಲೋಕಸಭೆ ಚುನಾವಣೆ ಏಪ್ರಿಲ್ 19ರಂದು ಆರಂಭವಾಗಲಿದ್ದು, ಅಧಿಕಾರದ ಚುಕ್ಕಾಣಿ ಹಿಡಿಯೋರು ಯಾರು ಎಂಬುದು ಜೂನ್ 4ರಂದು ನಿರ್ಧಾರವಾಗಲಿದೆ. ಇಂದಿನಿಂದ ಲೋಕಸಭೆ ಚುನಾವಣೆಗೆ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ.
ಮೊದಲ ಹಂತದ ಚುನಾವಣೆಗೆ ನಾಮಪತ್ರ ಸಲ್ಲಿಕೆ ಇಂದು ಆರಂಭವಾಗಿದ್ದು, ಮಾರ್ಚ್ 27ಕ್ಕೆ ಮುಕ್ತಾಯವಾಗಲಿದೆ. ಮೊದಲ ಹಂತದ ಚುನಾವಣೆ ಏಪ್ರಿಲ್ 19, ಎರಡನೇ ಹಂತದ ಮತದಾನ ಏಪ್ರಿಲ್ 26, ಮೂರನೇ ಹಂತದ ಮತದಾನ ಮೇ 7ರಂದು ನಡೆಯಲಿದೆ. ಅದೇ ರೀತಿ ಮೇ 13 ರಂದು ನಾಲ್ಕನೇ, ಮೇ 20 ರಂದು ಐದನೇ, ಮೇ 25 ರಂದು 6 ಹಾಗೂ ಜೂನ್ 1 ರಂದು ಏಳನೇ ಹಂತದಲ್ಲಿ ಮತದಾನ ನಡೆಯಲಿದೆ. ಮೊದಲ ಹಂತದಲ್ಲಿ 102 ಲೋಕಸಭೆ ಕ್ಷೇತ್ರಗಳಿಗೆ ಮತದಾನ ನಡೆದರೆ, ಎರಡನೇ ಹಂತದಲ್ಲಿ 89, ಮೂರನೇ ಹಂತದಲ್ಲಿ 94, ನಾಲ್ಕನೇ ಹಂತದಲ್ಲಿ 96, ಐದನೇ ಹಂತದಲ್ಲಿ 49, ಆರನೇ ಹಂತದಲ್ಲಿ 57 ಹಾಗೂ ಏಳನೇ ಹಂತದಲ್ಲಿ 57 ಲೋಕಸಭೆ ಕ್ಷೇತ್ರಗಳಿಗೆ ಮತದಾನ ನಡೆಯಲಿದೆ.