ಹೊಸದಿಗಂತ ಡಿಜಿಟಲ್ ಡೆಸ್ಕ್:
ಉತ್ತರ ಕರ್ನಾಟಕದ ಜೀವನದಿ ಕೃಷ್ಣಾ ನದಿ ಮೈದುಂಬಿ ಹರಿಯುತ್ತಿದ್ದು, ಉತ್ತರ ಕರ್ನಾಟಕದ ಜೀವನಾಡಿಯಾಗಿರುವ ಆಲಮಟ್ಟಿ ಜಲಾಶಯ ಸಂಪೂರ್ಣ ಭರ್ತಿಯಾಗಿದೆ. ಈ ಹಿನ್ನೆಲೆಯಲ್ಲಿ ಕೃಷ್ಣೆಯ ಜಲಧಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಸೆ.6ರಂದು ಬಾಗಿನ ಅರ್ಪಿಸಲಿದ್ದಾರೆ.
ಜಲಾಶಯದ ಒಳಹರಿವು ಸ್ಥಿರವಾಗಿ ಮುಂದುವರೆದಿದೆ, ಇದರಿಂದಾಗಿ ಆಲಮಟ್ಟಿ ಜಲಾಶಯ ಭರ್ತಿಯಾಗಿದೆ. ಗುರುವಾರ ಜಲಾಶಯ ತನ್ನ ಪೂರ್ಣ ಸಂಗ್ರಹ ಸಾಮರ್ಥ್ಯವಾದ 519.60 ಮೀಟರ್ ಅನ್ನು ತಲುಪಿದ್ದು, ಅಣೆಕಟ್ಟಿನಲ್ಲಿ 123.081 ಟಿಎಂಸಿಎಫ್‌ಟಿ ನೀರು ಸಂಗ್ರಹವಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಜಲಾಶಯದ ಒಳಹರಿವು 59,312 ಕ್ಯೂಸೆಕ್‌ಗಳಾಗಿದ್ದು, ನಾಲ್ಕು ಕ್ರೆಸ್ಟ್ ಗೇಟ್‌ಗಳು ಮತ್ತು ಕೆಪಿಸಿಎಲ್ ಚಾನಲ್‌ಗಳ ಮೂಲಕ 50,000 ಕ್ಯೂಸೆಕ್‌ಗಳನ್ನು ಬಿಡುಗಡೆ ಮಾಡಲಾಗಿದೆ.
ಜಲಾಶಯ ಭರ್ತಿಯಾಗಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಹೆಲಿಕಾಪ್ಟರ್ ಮೂಲಕ ಆಲಮಟ್ಟಿ ತಲುಪಲಿದ್ದು, ನಂತರ ಜಲಾಶಯಕ್ಕೆ ಬಾಗಿನ ಅರ್ಪಿಸಲಿದ್ದಾರೆ. ಕೆಬಿಜೆಎನ್‌ಎಲ್ ವ್ಯವಸ್ಥಾಪಕ ನಿರ್ದೇಶಕರ ಕಚೇರಿಯಲ್ಲಿ ಪರಿಶೀಲನಾ ಸಭೆ ನಡೆಸಿ, ಮಾಧ್ಯಮಗಳೊಂದಿಗೆ ಸಂವಾದ ನಡೆಸಲಿದ್ದಾರೆಂದು ತಿಳಿದುಬಂದಿದೆ.