ಶೀಘ್ರದಲ್ಲೇ ಖಾಲಿ ಇರುವ ಪೊಲೀಸ್ ಹುದ್ದೆಗಳ ಭರ್ತಿ: ಸಿಎಂ ಸಿದ್ದರಾಮಯ್ಯ

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯದಲ್ಲಿ ಖಾಲಿ ಇರುವ ಪೊಲೀಸ್ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ರಾಜ್ಯ ಪೊಲೀಸ್ ಮಹಾನಿರ್ದೇಶಕರ ಕಚೇರಿಯಲ್ಲಿ ನಡೆದ ಹಿರಿಯ ಪೊಲೀಸ್ ಅಧಿಕಾರಿಗಳ ವಾರ್ಷಿಕ ಸಮಾವೇಶದಲ್ಲಿ ಇಂದು ಪಾಲ್ಗೊಂಡು ಮಾತನಾಡಿದ ಅವರು, ಕರ್ನಾಟಕಏಕೀಕರಣದ 50 ವರ್ಷದ ನೆನಪಿಗಾಗಿ ಸುವರ್ಣ ಪೊಲೀಸ್ ಭವನ ಕಟ್ಟಡ ನಿರ್ಮಾಣಕ್ಕೆ ಬಜೆಟ್ ನಲ್ಲಿ ಹಣ ನೀಡಲಾಗುವುದು. ಖಾಲಿ ಇರುವ ಪೊಲೀಸ್ ಹುದ್ದೆಗಳನ್ನೂ ಭರ್ತಿ ಮಾಡಲಾಗುವುದು.ವರ್ಗಾವಣೆಗಳಿಗೆ ಪೊಲೀಸ್ ಅಧಿಕಾರಿಗಳು ಹಾತೊರೆಯುವುದು, ಜಾತಿ ಬಳಸುವುದು ಅತ್ಯಂತ ಕೆಟ್ಟದ್ದು.ಕಳ್ಳತನ ಹೆಚ್ಚಾಗ್ತಾ ಇದೆ ಎಂದರೆ ಗಸ್ತು ವ್ಯವಸ್ಥೆ, ಹೋಯ್ಸಳ ಸಿಬ್ಬಂದಿ ಮತ್ತು ಠಾಣಾಧಿಕಾರಿಗಳು ವಿಫಲರಾಗಿದ್ದಾರೆ ಎಂದೇ ಅರ್ಥ. ಇದೇ ಸ್ಥಿತಿ ಮುಂದುವರೆದರೆ DCP ಗಳನ್ನು ಕರ್ತವ್ಯಲೋಪಕ್ಕೆ ಹೊಣೆ ಮಾಡಲಾಗುವುದು ಎಂದು ಹೇಳಿದರು.

ನಮ್ಮದು ಜಾತ್ಯತೀತ ರಾಷ್ಟ್ರ. ನಾವುಗಳೇ ನಮ್ಮ ಸಂವಿಧಾನದ ಆಶಯಗಳನ್ನು ಬಲಪಡಿಸಬೇಕು. ಆಧುನಿಕ ತಂತ್ರಜ್ಞಾನದ ಬಳಕೆಯಿಂದ ಅಪರಾಧ ಪ್ರಕರಣಗಳಿಗೆ ಕಡಿವಾಣ ಸಾಧ್ಯವಿದೆ. ಇದನ್ನು ಪೊಲೀಸ್ ಇಲಾಖೆ ಪರಿಣಾಮಕಾರಿಯಾಗಿ ಮಾಡಬೇಕು ಎಂದು ಹೇಳಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!