Friday, October 7, 2022

Latest Posts

ಸಿನಿ ತಾರೆಯರ ಸ್ವಾತಂತ್ರ್ಯ ದಿನಾಚರಣೆ ಹಾಗೂ ಶುಭಾಶಯಗಳ ಝಲಕ್‌ ಇಲ್ಲಿದೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಇಂದು ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ, ಸಿನಿ ಗಣ್ಯರು ತಮ್ಮ ಮನೆಗಳಲ್ಲಿ ಧ್ವಜವನ್ನು ಹಾರಿಸಿ ಮತ್ತು ಆ ಫೋಟೋಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ತಮ್ಮ ಅಭಿಮಾನಿಗಳೊಂದಿಗೆ ಹಂಚಿಕೊಂಡಿದ್ದಾರೆ, ಅಭಿಮಾನಿಗಳು ಮತ್ತು ಜನರಿಗೆ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳನ್ನು ಕೋರುತ್ತಿದ್ದಾರೆ.

ಪಸರಿಸಲಿ ವಿಶ್ವಕ್ಕೆಲ್ಲಾ ಭಾರತದ ತ್ರಿವರ್ಣ ಧ್ವಜದ ಹಿರಿಮೆ ಪ್ರತಿಯೊಬ್ಬ ಭಾರತೀಯ ಹೆಮ್ಮೆಯಿಂದ ಹೇಳುವ ‘ಜೈ ಹಿಂದ್’ ಎಂದು.
ಎಲ್ಲರಿಗೂ ಸ್ವಾತಂತ್ರ್ಯ ಅಮೃತ ಮಹೋತ್ಸವದ ಶುಭಾಶಯಗಳು ಎಂದು ರಾಕಿಂಗ್‌ ಸ್ಟಾರ್‌ ಯಶ್‌ ವಿಶ್‌ ಮಾಡಿದ್ದಾರೆ. ತಮ್ಮ ಮನೆಯಲ್ಲಿ ಪತ್ನಿ, ಪುತ್ರಿ ಪುತ್ರನೊಂದಿಗೆ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಿಕೊಂಡಿದ್ದಾರೆ.

ಮೆಹಾಸ್ಟಾರ್‌ ಚಿರಂಜೀವಿ ಅವರ ನಿವಾಸದ ಮೇಲೂ ತಿರಂಗ ಹಾರಾಡಿದೆ. ದೇಶದ ಜನತೆಗೆ ಸ್ವಾತಂತ್ರ್ಯ ದಿನಾಚರಣೆಯನ್ನು ಶುಭಾಶಯಗಳನ್ನು ಮೆಗಾಸ್ಟಾರ್‌ ಚಿರಂಜೀವಿ ತಿಳಿಸಿದ್ದಾರೆ.

ಜ್ಯೂನಿಯರ್‌ ಎನ್‌ಟಿಆರ್‌, ಹಾಗೂ ರಾಮ್‌ಚರಣ್ ತಮ್ಮ ಟ್ವಿಟ್ಟರ್‌ ಖಾತೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯ ತಿಳಿಸಿದ್ದಾರೆ.

 

ಬಾಲಿವುಡ್‌ ನಟ ಸೋನು ಸೂದ್‌ ರಾಷ್ಟ್ರಗೀತೆ ಹಾಡಿನ ಮೂಲಕ ವಿಡಿಯೋ ಶೇರ್‌ ಮಾಡಿದ್ದಾರೆ.

ಶಾರೂಖಾನ್‌ ಹಾಗೂ ವಿರೂಷ್ಕಾ ದಂಪತಿ ಕೂಡ ತಮ್ಮ ನಿವಾಸದಲ್ಲಿ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಿ, ತಮ್ಮ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಫೋಟೋ ಶೇರ್‌ ಮಾಡಿದ್ದಾರೆ.

ಸೂಪರ್‌ ಸ್ಟಾರ್‌ ಮಹೇಶ್‌ ಬಾಬು ತಿರಂಗ ಹಿಡಿದು ತಮ್ಮ ಮಗಳೊಂದಿಗಿರುವ ಫೋಟೋ ಶೇರ್‌ ಮಾಡಿ ಶುಭಾಶಯ ತಿಳಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!