ಫಿಲ್ಮ್ ಫೇರ್ ಪ್ರಶಸ್ತಿ: ಡಾಲಿ ಧನಂಜಯ್ ಅತ್ಯುತ್ತಮ ನಟ ಪ್ರಶಸ್ತಿ, ಜೀವಮಾನ ಸಾಧನೆಗಾಗಿ ಪುನೀತ್​ಗೆ ಅವಾರ್ಡ್!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಬೆಂಗಳೂರಿನಲ್ಲಿ ದಕ್ಷಿಣ ಭಾರತದ ಫಿಲ್ಮ್ ಫೇರ್ ಪ್ರಶಸ್ತಿ ಪ್ರದಾನ ಸಮಾರಂಭವು ಭಾನುವಾರ ನಡೆದಿದ್ದು, 2020 ಹಾಗೂ 2021ನೇ ಸಾಲಿನಲ್ಲಿ ಬಿಡುಗಡೆಯಾದ ಸಿನಿಮಾಗಳಿಗೆ 67ನೇ ಫಿಲ್ಮ್ ಫೇರ್ ಪ್ರಶಸ್ತಿಗಳನ್ನು ನೀಡಲಾಗಿದೆ.
ಕನ್ನಡ, ತಮಿಳು, ತೆಲುಗು ಹಾಗೂ ಮಲಯಾಳಂ ಸಿನಿಮಾಗಳಿಗೆ ಪ್ರತ್ಯೇಕವಾಗಿ ಈ ಪ್ರಶಸ್ತಿಗಳನ್ನು ನೀಡಲಾಗಿತ್ತು.

ಅತ್ಯುತ್ತಮ ನಟ ಪ್ರಶಸ್ತಿಯು ಡಾಲಿ ಧನಂಜಯ್ ಬಡವ ರಾಸ್ಕಲ್ ಸಿನಿಮಾದ ನಟನೆಗಾಗಿ ಪಡೆದುಕೊಂಡಿದ್ದಾರೆ. ಈ ಬಾರಿ ಜೀವಮಾನ ಸಾಧನೆಗಾಗಿ ಪುನೀತ್ ಅವರಿಗೆ ಮರಣೋತ್ತರ ಪ್ರಶಸ್ತಿಯನ್ನು ಘೋಷಿಸಿದ್ದು, ಈ ಪ್ರಶಸ್ತಿಯನ್ನು ಪುನೀತ್ ಪತ್ನಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಪಡೆದುಕೊಂಡಿದ್ದಾರೆ.

ತೆಲುಗು ಚಿತ್ರ ಲವ್ ಸ್ಟೋರಿಗಾಗಿ ಸಾಯಿ ಪಲ್ಲವಿ ಅತ್ಯುತ್ತಮ ನಟಿ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡರೆ, ತಮಿಳು ಚಿತ್ರರಂಗದಲ್ಲಿ ಸೂರ್ಯ ಜೊತೆ ನಟಿಸಿದ ಜೈ ಭೀಮ್ ಚಿತ್ರದಲ್ಲಿನ ಪಾತ್ರಕ್ಕಾಗಿ ಲಿಜೋಮೋಲ್ ಜೋಸ್ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.

ಕನ್ನಡದ ತಾರೆಯರ ಪೈಕಿ ಬಡವ ರಾಸ್ಕಲ್ ಚಿತ್ರಕ್ಕಾಗಿ ಧನಂಜಯ್ ಅತ್ಯುತ್ತಮ ನಟ ಪ್ರಶಸ್ತಿ ಪಡೆದುಕೊಂಡಿದ್ದಾರೆ. 2020 ರ ಮಲಯಾಳಂ ಚಿತ್ರ ಅಯ್ಯಪ್ಪನುಂ ಕೊಶಿಯುಮ್‌ಗಾಗಿ ಬಿಜು ಮೆನನ್ ಅವರಿಗೆ ಅತ್ಯುತ್ತಮ ನಟ ಫಿಲ್ಮ್‌ಫೇರ್ ನೀಡಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!