Thursday, March 23, 2023

Latest Posts

ರಾಜ್ಯಸಭಾ ಕಲಾಪ ಚಿತ್ರೀಕರಣ: ಕಾಂಗ್ರೆಸ್ ಸಂಸದೆ ರಜನಿ ಬಜೆಟ್ ಅಧಿವೇಶನದಿಂದ ಅಮಾನತು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ರಾಜ್ಯಸಭಾ ಕಲಾಪ ಚಿತ್ರೀಕರಣ ಮಾಡಿದ್ದಕ್ಕಾಗಿ ಕಾಂಗ್ರೆಸ್ ಸಂಸದೆ ರಜನಿ ಅಶೋಕರಾವ್ ಪಾಟೀಲ್ ಅವರನ್ನು ಅಧ್ಯಕ್ಷ ಜಗದೀಪ್ ಧಂಖರ್ ಅವರು ಪ್ರಸ್ತುತ ಬಜೆಟ್ ಅಧಿವೇಶನದ ಉಳಿದ ಅವಧಿಗೆ ಶುಕ್ರವಾರ ಅಮಾನತುಗೊಳಿಸಿದ್ದಾರೆ.

ಗುರುವಾರ ಪ್ರಧಾನಿ ನರೇಂದ್ರ ಮೋದಿ ಅವರ ಭಾಷಣದ ವೇಳೆ ನಡೆದ ಗದ್ದಲವನ್ನು ಚಿತ್ರೀಕರಿಸಿದವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದ ಧಂಖರ್ ಅವರು, ಈ ಬಗ್ಗೆ ತಮ್ಮ ಅಭಿಪ್ರಾಯವನ್ನು ತಿಳಿಸುವಂತೆ ರಾಜಕೀಯ ಪಕ್ಷಗಳ ನಾಯಕರಿಗೆ ಕೇಳಿದ್ದರು.

ಬಜೆಟ್ ಅಧಿವೇಶದಿಂದ ಪಾಟೀಲ್ ಅವರನ್ನು ಅಮಾನತುಗೊಳಿಸುವ ನಿರ್ಣಯ ಅಂಗೀಕರಿಸಲಾಗಿತ್ತು. ಆದರೆ ಈ ವಿಷಯದ ಕುರಿತು ಸಂಸದೀಯ ಹಕ್ಕು ಬಾಧ್ಯತೆ ಸಮಿತಿಯ ವರದಿ ಬಾಕಿ ಇದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!