Sunday, December 28, 2025

ಫಿಲ್ಮಿ ಸ್ಟೈಲ್ ದರೋಡೆ: ಗನ್ ತೋರಿಸಿ 5 ಕೋಟಿ ಮೌಲ್ಯದ ಚಿನ್ನಾಭರಣ ಲೂಟಿ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮೈಸೂರು ಜಿಲ್ಲೆಯ ಹುಣಸೂರು ಪಟ್ಟಣದಲ್ಲಿ ಇಂದು ಭೀಕರ ದರೋಡೆ ಪ್ರಕರಣವೊಂದು ವರದಿಯಾಗಿದ್ದು, ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಪಟ್ಟಣದ ಬಸ್‌ ನಿಲ್ದಾಣದ ಹಿಂಭಾಗದ ಬೈಪಾಸ್ ರಸ್ತೆಯಲ್ಲಿರುವ ‘ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್’ ಮಳಿಗೆಗೆ ನುಗ್ಗಿದ ಐದಕ್ಕೂ ಹೆಚ್ಚು ಸಶಸ್ತ್ರ ದರೋಡೆಕೋರರು, ಕೋಟ್ಯಂತರ ರೂಪಾಯಿ ಮೌಲ್ಯದ ಆಭರಣಗಳನ್ನು ಲೂಟಿ ಮಾಡಿದ್ದಾರೆ.

ಇಂದು ಮಧ್ಯಾಹ್ನ ವ್ಯಾಪಾರ ವಹಿವಾಟು ನಡೆಯುತ್ತಿದ್ದ ವೇಳೆ ಏಕಾಏಕಿ ಅಂಗಡಿಗೆ ನುಗ್ಗಿದ ದುಷ್ಕರ್ಮಿಗಳ ತಂಡ, ಸಿಬ್ಬಂದಿಗೆ ಬಂದೂಕು ತೋರಿಸಿ ಬೆದರಿಸಿದ್ದಾರೆ. ಕೆಲವೇ ನಿಮಿಷಗಳಲ್ಲಿ ಸುಮಾರು 4 ರಿಂದ 5 ಕೋಟಿ ರೂಪಾಯಿ ಮೌಲ್ಯದ ಚಿನ್ನ ಮತ್ತು ವಜ್ರಾಭರಣಗಳನ್ನು ದೋಚಿದ ಗ್ಯಾಂಗ್, ಸ್ಥಳದಿಂದ ಪರಾರಿಯಾಗಿದೆ. ಪಟ್ಟಣದ ಜನನಿಬಿಡ ಪ್ರದೇಶದಲ್ಲೇ ಈ ಕೃತ್ಯ ನಡೆದಿರುವುದು ಸ್ಥಳೀಯರನ್ನು ಬೆಚ್ಚಿಬೀಳಿಸಿದೆ.

ವಿಷಯ ತಿಳಿಯುತ್ತಿದ್ದಂತೆಯೇ ಹುಣಸೂರು ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಘಟನಾ ಸ್ಥಳದ ಸಿಸಿಟಿವಿ ದೃಶ್ಯಾವಳಿಗಳನ್ನು ವಶಕ್ಕೆ ಪಡೆಯಲಾಗಿದ್ದು, ದರೋಡೆಕೋರರ ಪತ್ತೆಗಾಗಿ ತೀವ್ರ ಹುಡುಕಾಟ ಆರಂಭಿಸಿದ್ದಾರೆ. ಮೇಲ್ನೋಟಕ್ಕೆ ಇದು ಪೂರ್ವಯೋಜಿತ ಕೃತ್ಯದಂತೆ ಕಂಡುಬರುತ್ತಿದ್ದು, ತನಿಖೆ ಪ್ರಗತಿಯಲ್ಲಿದೆ.

error: Content is protected !!