ಅಂತಿಮ ಹಂತದ ಬಜೆಟ್​ ಸಿದ್ಧತೆ: ಹಲ್ವಾ ಸಮಾರಂಭ ನಡೆಸಿ ಸಿಬ್ಬಂದಿಗೆ ಸಿಹಿ ಹಂಚಿದ ನಿರ್ಮಲಾ ಸೀತಾರಾಮನ್!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಕೇಂದ್ರ ಬಜೆಟ್ ಸಿದ್ದತೆಗೆ ದೆಹಲಿಯ ನಾರ್ಥ್ ಬ್ಲಾಕ್​ನಲ್ಲಿರುವ ಹಣಕಾಸು ಸಚಿವಾಲಯದ ಮುಖ್ಯ ಕಚೇರಿಯಲ್ಲಿ ಹಂಚುವ ಮೂಲಕ ಚಾಲನೆ ನೀಡಲಾಯಿತು.

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸಿಬ್ಬಂದಿಗೆ ಹಲ್ವಾ ಹಂಚುವ ಮೂಲಕ ಅಂತಿಮ ಹಂತದ ಬಜೆಟ್ ಸಿದ್ಧತೆಗೆ ಚಾಲನೆ ನೀಡಿದರು.

ಅಂತಿಮ ಹಂತದ ಬಜೆಟ್​ ಸಿದ್ಧತೆ ಆರಂಭವಾಗಿದ್ದು, ಹಲ್ವಾ ಸಮಾರಂಭ ನಡೆಸುವ ಮೂಲಕ ಹಣಕಾಸು ಸಚಿವರು ಚಾಲನೆ ನೀಡಿದ್ದಾರೆ ಎಂದು ಕೇಂದ್ರ ಹಣಕಾಸು ಸಚಿವರ ಟ್ವಿಟರ್​ ಖಾತೆಯಿಂದ ಟ್ವೀಟ್ ಮಾಡಲಾಗಿದೆ.

ಹಲ್ವಾ ಸಮಾರಂಭದಲ್ಲಿ ಹಣಕಾಸು ಸಚಿವಾಲಯದ ಹಿರಿಯ ಅಧಿಕಾರಿಗಳು, ಸಹಾಯಕ ಸಚಿವರು, ಕಾರ್ಯದರ್ಶಿಗಳು ಹಾಗೂ ಇತರ ಸಿಬ್ಬಂದಿ ಪಾಲ್ಗೊಂಡರು.

 

ಸಾಮಾನ್ಯವಾಗಿ ಬಜೆಟ್ ಮಂಡನೆ ದಿನದ ವರೆಗೂ ಅಧಿಕಾರಿಗಳು ಕಚೇರಿಯಲ್ಲೇ ಇರಬೇಕಾಗುತ್ತದೆ. ಬಜೆಟ್ ಮಾಹಿತಿಯ ಗೋಪ್ಯತೆ ಕಾಪಾಡಿಕೊಳ್ಳುವುದಕ್ಕಾಗಿ ಈ ನಿಯಮ ಅನುಸರಿಸಲಾಗುತ್ತದೆ. ಹೀಗಾಗಿ ಇಂದು ಕಾರ್ಯಕ್ಕೆ ಚಾಲನೆ ಸಿಕ್ಕಿತು.
ಈ ಬಾರಿಯೂ ಕಾಗದರಹಿತ ಮಾದರಿಯಲ್ಲಿ ಬಜೆಟ್ ಮಂಡನೆಯಾಗಲಿದೆ. ಇದರೊಂದಿಗೆ ಸತತ ಮೂರನೇ ಬಾರಿಗೆ ಕಾಗದ ರಹಿತ ಬಜೆಟ್ ಮಂಡನೆ ಮಾಡಲಾಗುತ್ತಿದೆ ಎಂದು ಹಣಕಾಸು ಸಚಿವಾಲಯ ತಿಳಿಸಿದೆ.

ಇಂಗ್ಲಿಷ್ ಮತ್ತು ಹಿಂದಿಯಲ್ಲಿ ಬಜೆಟ್ ಪ್ರತಿಗಳು ದೊರೆಯಲಿವೆ. ಆ್ಯಂಡ್ರಾಯ್ಡ್ ಮತ್ತು ಆ್ಯಪಲ್ ಒಎಸ್​​ಗಳಲ್ಲಿ ‘ಯೂನಿಯನ್ ಬಜೆಟ್ ಮೊಬೈಲ್ ಆ್ಯಪ್’ ಲಭ್ಯವಿದ್ದು, ಹಣಕಾಸು ಸಚಿವರು ಬಜೆಟ್ ಮಂಡನೆ ಮಾಡಿದ ಬಳಿಕ ಬಜೆಟ್ ಪ್ರತಿ ದೊರೆಯಲಿದೆ ಎಂದು ಸಚಿವಾಲಯ ತಿಳಿಸಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!