ಹೊಸದಿಗಂತ ಡಿಜಿಟಲ್ ಡೆಸ್ಕ್:
ಮುಡಾ ಹಗರಣ ಸಂಬಂಧ ರಾಜ್ಯಪಾಲರು ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿಯ ಅಂತಿಮ ಹಂತದ ವಿಚಾರಣೆ ಇಂದು ಕರ್ನಾಟಕ ಹೈಕೋರ್ಟ್‌ನಲ್ಲಿ ನಡೆಯಲಿದೆ.
ಸೋಮವಾರದ ವಾದದಲ್ಲಿ ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ಸಚಿವ ಸಂಪುಟದ ನಿರ್ಣಯವನ್ನು ಸಮರ್ಥಿಸಿಕೊಂಡಿದ್ದರು. ಇಂದು ಸಿದ್ದರಾಮಯ್ಯ ಪರ ಅಭಿಷೇಕ್ ಮನು ಸಿಂಘ್ವಿ ವಾದ ಮಂಡಿಸಲಿದ್ದು, ಕುತೂಹಲ ಕೆರಳಿಸಿದೆ.
ಸೋಮವಾರ ವಾದ ಮಂಡಿಸಿದ್ದ ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ, ಸರ್ಕಾರದ ಪರವಾಗಿ ಪ್ರಬಲ ವಾದ ಮಂಡಿಸಿದ್ದರು. 17ಎ ಅಡಿ ಪ್ರಾಸಿಕ್ಯೂಷನ್ಗೆ ಪೊಲೀಸರು ಅನುಮತಿ ಕೇಳಬಹುದು, ಅದಕ್ಕೂ ಮೊದಲು ತನಿಖಾಧಿಕಾರಿ ಪ್ರಾಥಮಿಕ ತನಿಖೆ ನಡೆಸಬೇಕು, ಪ್ರಾಥಮಿಕ ತನಿಖೆಯ ವಿವರವನ್ನು ಸಕ್ಷಮ ಪ್ರಾಧಿಕಾರಕ್ಕೆ ನೀಡಬೇಕು. ವಿಚಾರಣೆ, ತನಿಖೆಗೂ ಮುನ್ನ 17ಎ ಅನುಮತಿ ಬೇಕಲ್ಲವೇ ಎಂದು ಪ್ರಶ್ನಿಸಿದ್ದರು.