April 11, 2026
Saturday, April 11, 2026
spot_img

ಕಡೇ ಹಂತದ ಲೋಡ್ ಟೆಸ್ಟಿಂಗ್ : 5 ದಿನಗಳ ಕಾಲ ಪೀಣ್ಯ ಫ್ಲೈ ಓವರ್ ಬಂದ್

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ತುಮಕೂರು ರಸ್ತೆಯ ಪೀಣ್ಯ ಎಲಿವೇಟೆಡ್‌ ಫ್ಲೈ ಓವರ್‌ನ ಕೇಬಲ್‌ ದುರಸ್ತಿ ಕಾರ್ಯ ಮುಗಿದಿದೆ. ಇದೀಗ ಅಂತಿಮ ಹಂತದ ಲೋಡ್‌ ಟೆಸ್ಟಿಂಗ್‌ ಪ್ರಕ್ರಿಯೆ ನಡೆಯುತ್ತಿದೆ.

ಈ ಹಿನ್ನೆಲೆಯಲ್ಲಿ ಮೇಲ್ಸೇತುವೆಯನ್ನು ಏಪ್ರಿಲ್ 13ರಿಂದ ಐದು ದಿನಗಳ ಕಾಲ ಸಂಪೂರ್ಣವಾಗಿ ಬಂದ್ ಮಾಡಲಾಗುವುದು ಎಂದು ಪೀಣ್ಯ ಸಂಚಾರಿ ಪೊಲೀಸರು ತಿಳಿಸಿದ್ದಾರೆ. ಏಪ್ರಿಲ್ 13ರ ಬೆಳಗ್ಗೆ 5 ಗಂಟೆಯಿಂದ ಆರಂಭಗೊಂಡು, ಏಪ್ರಿಲ್ 17ರ ಬೆಳಗ್ಗೆ 11 ಗಂಟೆಯವರೆಗೆ ಫ್ಲೈಓವರ್ ಮೇಲೆ ಯಾವುದೇ ವಾಹನ ಸಂಚಾರಕ್ಕೆ ಅವಕಾಶವಿರುವುದಿಲ್ಲ.

ಆದರೆ ಸಂಚಾರಕ್ಕೆ ಬದಲಿ ಮಾರ್ಗಗಳನ್ನು ಪೊಲೀಸರು ಸೂಚಿಸಿದ್ದು, ಐದು ದಿನಗಳವರೆಗೆ ಈ ಮಾರ್ಗಗಳಲ್ಲಿ ಸಾಗುವಂತೆ ಪೊಲೀಸರು ಮನವಿ ಮಾಡಿದ್ದಾರೆ. ನೆಲಮಂಗಲದಿಂದ ಬೆಂಗಳೂರು ಕಡೆಗೆ ಬರುವ ವಾಹನಗಳು ಕೆನ್ನಮೆಟಲ್ ವಿಡಿಯಾ ಹತ್ತಿರ ಫ್ಲೈಓವರ್ ಕೆಳಭಾಗದ ಎನ್‌ಹೆಚ್-4 ಮತ್ತು ಸರ್ವಿಸ್ ರಸ್ತೆ ಮೂಲಕ 8ನೇ ಮೈಲಿ, ದಾಸರಹಳ್ಳಿ, ಜಾಲಹಳ್ಳಿ ಕ್ರಾಸ್, ಪೀಣ್ಯ ಪೊಲೀಸ್ ಠಾಣೆ ಜಂಕ್ಷನ್, ಎಸ್‌ಆರ್‌ಎಸ್ ಜಂಕ್ಷನ್ ಮತ್ತು ಗೊರಗುಂಟೆಪಾಳ್ಯ ಮೂಲಕ ಸಂಚರಿಸಬಹುದಾಗಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !