ಇಂಗ್ಲೆಂಡ್ ವಿರುದ್ಧದ ಅಂತಿಮ ಟೆಸ್ಟ್ ಪಂದ್ಯ: ಕೆ.ಎಲ್ ರಾಹುಲ್ ಔಟ್, ಬುಮ್ರಾ ಕಮ್ ಬ್ಯಾಕ್!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಇಂಗ್ಲೆಂಡ್ ವಿರುದ್ಧದ ಐದನೇ ಮತ್ತು ಅಂತಿಮ ಟೆಸ್ಟ್ ಪಂದ್ಯಕ್ಕೆ ಬಿಸಿಸಿಐ ಗುರುವಾರ ಪರಿಷ್ಕೃತ ಭಾರತ ತಂಡವನ್ನು ಪ್ರಕಟಿಸಿದೆ. ಬುಮ್ರಾ ಕಮ್ ಬ್ಯಾಕ್ ಮಾಡಿದ್ದು, ಕೆ.ಎಲ್ ರಾಹುಲ್ ಔಟ್ ಆಗಿದ್ದಾರೆ.

ರಾಂಚಿಯಲ್ಲಿ ನಡೆದ ನಾಲ್ಕನೇ ಟೆಸ್ಟ್ ನಿಂದ ಬುಮ್ರಾಗೆ ವಿಶ್ರಾಂತಿ ನೀಡಲಾಗಿತ್ತು. ರಾಂಚಿಯಲ್ಲಿ ನಡೆಯಲಿರುವ 4 ನೇ ಟೆಸ್ಟ್ ತಂಡದಿಂದ ಬಿಡುಗಡೆಯಾದ ಜಸ್ಪ್ರೀತ್ ಬುಮ್ರಾ, 5 ನೇ ಟೆಸ್ಟ್ಗಾಗಿ ಧರ್ಮಶಾಲಾದಲ್ಲಿ ತಂಡದೊಂದಿಗೆ ಸಂಪರ್ಕ ಸಾಧಿಸಲಿದ್ದಾರೆ” ಎಂದು ಬಿಸಿಸಿಐ ಪ್ರಕಟಣೆಯಲ್ಲಿ ತಿಳಿಸಿದೆ.

ಕೆ ಎಲ್ ರಾಹುಲ್, ಇಂಗ್ಲೆಂಡ್ ಎದುರಿನ 5 ಪಂದ್ಯಗಳ ಟೆಸ್ಟ್ ಸರಣಿಯ ಪೈಕಿ ಮೊದಲ ಪಂದ್ಯವನ್ನಷ್ಟೇ ಆಡಿದ್ದರು. ಇದಾದ ಬಳಿಕ ಗಾಯದ ಸಮಸ್ಯೆಯಿಂದ ಕಳೆದ ಮೂರು ಟೆಸ್ಟ್ ಪಂದ್ಯಗಳಿಂದ ಹೊರಗುಳಿದಿದ್ದರು. ಕೆ ಎಲ್ ರಾಹುಲ್ ಗಾಯದ ಕುರಿತಂತೆ ಬಿಸಿಸಿಐ ವೈದ್ಯಕೀಯ ಸಿಬ್ಬಂದಿ ನಿಗಾಯಿಟ್ಟಿದೆ.

ವಾಷಿಂಗ್ಟನ್ ಸುಂದರ್ ಅವರನ್ನು ತಂಡದಿಂದ ರಿಲೀಸ್ ಮಾಡಲಾಗಿದ್ದು, ಅವರು ರಣಜಿ ಟ್ರೋಫಿ ಟೂರ್ನಿಯಲ್ಲಿ ತಮಿಳುನಾಡು ತಂಡವನ್ನು ಕೂಡಿಕೊಳ್ಳಲಿದ್ದಾರೆ. ತಮಿಳುನಾಡು ತಂಡವು ಮಾರ್ಚ್ 02ರಿಂದ ಆರಂಭವಾಗಲಿರುವ ರಣಜಿ ಟ್ರೋಫಿ ಸೆಮಿಫೈನಲ್ ಪಂದ್ಯದಲ್ಲಿ ಮುಂಬೈ ತಂಡವನ್ನು ಎದುರಿಸಲಿದೆ. ಈ ಪಂದ್ಯದಲ್ಲಿ ವಾಷಿಂಗ್ಟನ್ ಸುಂದರ್ ತಮಿಳುನಾಡು ಪರ ಕಣಕ್ಕಿಳಿಯಲಿದ್ದು, ಡೊಮೆಸ್ಟಿಕ್ ಸೀಸನ್ ಮುಗಿದ ಬಳಿಕ ಅಗತ್ಯವಿದ್ದರೆ, ಅವರು 5ನೇ ಟೆಸ್ಟ್ ಪಂದ್ಯ ಕೂಡಿಕೊಳ್ಳುವ ಸಾಧ್ಯತೆಯಿದೆ” ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಇನ್ನು ಇದೇ ವೇಳೆ ಟೀಂ ಇಂಡಿಯಾ ಅನುಭವಿ ವೇಗಿ ಮೊಹಮ್ಮದ್ ಶಮಿ , ಸೋಮವಾರ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದು, ಸದ್ಯದಲ್ಲಿಯೇ ಬೆಂಗಳೂರಿನಲ್ಲಿರುವ ನ್ಯಾಷನಲ್ ಕ್ರಿಕೆಟ್ ಅಕಾಡೆಮಿಯಲ್ಲಿ ಪುನಶ್ಚೇತನ ಶಿಬಿರದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದೆ.

ಭಾರತ ತಂಡ ಹೀಗಿದೆ:
ರೋಹಿತ್ ಶರ್ಮಾ(ನಾಯಕ), ಜಸ್ಪ್ರೀತ್ ಬುಮ್ರಾ(ಉಪನಾಯಕ), ಯಶಸ್ವಿ ಜೈಸ್ವಾಲ್, ಶುಭ್‌ಮನ್ ಗಿಲ್, ರಜತ್ ಪಾಟೀದಾರ್, ಸರ್ಫರಾಜ್ ಖಾನ್, ಧೃವ್ ಜುರೆಲ್(ವಿಕೆಟ್ ಕೀಪರ್), ಕೆ ಎಸ್ ಭರತ್(ವಿಕೆಟ್ ಕೀಪರ್), ದೇವದತ್ ಪಡಿಕ್ಕಲ್, ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಮುಕೇಶ್ ಕುಮಾರ್, ಆಕಾಶ್ ದೀಪ್.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!