ದೇವಸ್ಥಾನಗಳಿಗೆ ಅಂತಿಮ ಕಂತಿನ ಅನುದಾನ: ಅಭಿವೃದ್ಧಿ ಕಾರ್ಯಗಳ ಲೆಕ್ಕ ಬಿಚ್ಚಿಟ್ಟ ಲಕ್ಷ್ಮೀ ಹೆಬ್ಬಾಳ್ಕರ್

ಹೊಸದಿಗಂತ ವರದಿ ಬೆಳಗಾವಿ: ಶಿಕ್ಷಣ, ಆರೋಗ್ಯ, ಧಾರ್ಮಿಕ ಕ್ಷೇತ್ರ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಆದ್ಯತೆ ನೀಡುವ ಮೂಲಕ ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಸರ್ವಾಂಗೀಣ ಪ್ರಗತಿಗೆ ಶ್ರಮಿಸಲಾಗುತ್ತಿದೆ ಎಂದು ಮಾಜಿ ಸಚಿವೆ ಹಾಗೂ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು. ಬೆಳಗಾವಿಯ ಕುವೆಂಪುನಗರದಲ್ಲಿರುವ ತಮ್ಮ ಗೃಹ ಕಚೇರಿಯಲ್ಲಿ ಮಂಗಳವಾರ 36 ದೇವಸ್ಥಾನಗಳಿಗೆ ಮೂರನೇ ಹಾಗೂ ಅಂತಿಮ ಕಂತಿನ ಅನುದಾನ ಬಿಡುಗಡೆ ಹಿನ್ನೆಲೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಈ ಸಂದರ್ಭದಲ್ಲಿ ದೇವಸ್ಥಾನ ಸಮಿತಿಗಳ ಪ್ರತಿನಿಧಿಗಳಿಗೆ ಅಭಿನಂದನಾ ಪತ್ರಗಳನ್ನು ವಿತರಿಸಲಾಯಿತು. … Continue reading ದೇವಸ್ಥಾನಗಳಿಗೆ ಅಂತಿಮ ಕಂತಿನ ಅನುದಾನ: ಅಭಿವೃದ್ಧಿ ಕಾರ್ಯಗಳ ಲೆಕ್ಕ ಬಿಚ್ಚಿಟ್ಟ ಲಕ್ಷ್ಮೀ ಹೆಬ್ಬಾಳ್ಕರ್