ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರತೀಯ ಸಂಗೀತ ಲೋಕದ ಕೋಗಿಲೆ ಗಾಯಕಿ ಆಶಾ ಭೋಸ್ಲೆ ಅವರ ಅಗಲಿಕೆ ದೇಶಾದ್ಯಂತ ದುಃಖದ ವಾತಾವರಣವನ್ನು ನಿರ್ಮಿಸಿದೆ. ಭಾನುವಾರ ಮಧ್ಯಾಹ್ನ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ಅವರು ಕೊನೆಯುಸಿರೆಳೆದ ನಂತರ, ಅವರ ಪಾರ್ಥಿವ ಶರೀರವನ್ನು ಲೋವರ್ ಪರೇಲ್‌ನ ನಿವಾಸದಲ್ಲಿ ಸಾರ್ವಜನಿಕ ಅಂತಿಮ ದರ್ಶನಕ್ಕಾಗಿ ಇರಿಸಲಾಗಿತ್ತು. ವಿವಿಧ ಕ್ಷೇತ್ರಗಳ ಗಣ್ಯರು ಆಗಮಿಸಿ ಶ್ರದ್ಧಾಂಜಲಿ ಸಲ್ಲಿಸುತ್ತಿದ್ದಾರೆ.
ಈ ವೇಳೆ ಭಾರತೀಯ ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ತಮ್ಮ ಪತ್ನಿ ಅಂಜಲಿ ತೆಂಡೂಲ್ಕರ್ ಅವರೊಂದಿಗೆ ಆಗಮಿಸಿ ಆಶಾ ಭೋಸ್ಲೆ ಅವರಿಗೆ ಅಂತಿಮ ನಮನ ಸಲ್ಲಿಸಿದರು. ಕುಟುಂಬ ಸದಸ್ಯರನ್ನು ಭೇಟಿ ಮಾಡಿದ ಸಂದರ್ಭ ಸಚಿನ್ ಭಾವುಕರಾಗಿ ಕಣ್ಣೀರು ಹಾಕಿದ ದೃಶ್ಯಗಳು ಎಲ್ಲರ ಮನಕಲಕುವಂತೆ ಮಾಡಿವೆ.
ಇದನ್ನೂ ಓದಿ:
ಸಚಿನ್ ಮತ್ತು ಆಶಾ ಭೋಸ್ಲೆ ಕುಟುಂಬದ ನಡುವೆ ವರ್ಷಗಳ ಆತ್ಮೀಯ ಸಂಬಂಧವಿತ್ತು. ಹಲವು ಸಂಗೀತ ಕಾರ್ಯಕ್ರಮಗಳು ಹಾಗೂ ಕ್ರಿಕೆಟ್ ಸಂಬಂಧಿತ ಕಾರ್ಯಕ್ರಮಗಳಲ್ಲಿ ಇಬ್ಬರೂ ಒಟ್ಟಿಗೆ ಕಾಣಿಸಿಕೊಂಡಿದ್ದರು. ಆಶಾ ಭೋಸ್ಲೆ ಅವರು ಸಚಿನ್ ಅವರನ್ನು “ಕ್ರಿಕೆಟ್ ದಿಗ್ಗಜ” ಎಂದು ಪ್ರೀತಿಯಿಂದ ಕರೆಯುತ್ತಿದ್ದರು.



