ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೊನೆಗೂ ಫೋನ್ ಪೇ ಸಿಇಒ ಸಮೀರ್ ನಿಗಮ್ ಕನ್ನಡಿಗರಿಗೆ ಕ್ಷಮೆ ಯಾಚಿಸಿದ್ದಾರೆ.
ನನ್ನ ಉದ್ದೇಶ ಕರ್ನಾಟಕ ಅಥವಾ ಕನ್ನಡಿಗರನ್ನು ಅವಮಾನಿಸುವುದಲ್ಲ. ನನ್ನ ಮಾತು ಯಾರಿಗಾದರೂ ನೋವಾಗಿದ್ದರೆ ಕ್ಷಮೆಯಾಚಿಸುತ್ತೇನೆ. ಕರುನಾಡಿನ ಜನರಲ್ಲಿ ಕ್ಷಮೆಯಾಚಿಸುವುದಾಗಿ ಹೇಳಿದ್ದಾರೆ.
ಖಾಸಗಿ ಸಂಸ್ಥೆಗಳಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ಕಲ್ಪಿಸುವ ರಾಜ್ಯ ಸರ್ಕಾರದ ನಿರ್ಧಾರವನ್ನು ಟೀಕಿಸಿದ್ದ ಸಮೀರ್ ನಿಗಮ್, ಭಾರತದಾತ್ಯಂತ 25,000ಕ್ಕೂ ಅಧಿಕ ಉದ್ಯೋಗಗಳನ್ನು ನಾನು ಸೃಷ್ಟಿಸಿದ್ದೇನೆ. ನನ್ನ ಮಕ್ಕಳು ಕರ್ನಾಟಕದಲ್ಲಿ ಉದ್ಯೋಗಕ್ಕೆ ಅರ್ಹರಲ್ಲವೇ ಎಂದು ಪ್ರಶ್ನಿಸಿದ್ದರು. ಈ ಹೇಳಿಕೆಯ ವಿರುದ್ಧ ಕನ್ನಡಿಗರಿಂದ ತೀವ್ರ ಆಕ್ರೋಶ ವ್ಯಕ್ತವಾಗಿತ್ತು.
ಸೋಶಿಯಲ್ ಮಿಡಿಯಾದಲ್ಲಿ ಬಾಯ್ಕಾಟ್ ಫೋನ್ ಪೇ ಅಭಿಯಾನ ಆರಂಭವಾಗಿತ್ತು. ಇದರ ಬೆನ್ನಲ್ಲೇ ಸಮೀರ್ ನಿಗಮ್ ಕ್ಷಮೆ ಯಾಚಿಸಿದ್ದಾರೆ.