ಕೊನೆಗೂ ಸಲ್ಮಾನ್ ಖಾನ್‌ ಜೊತೆಗಿನ ಡೇಟಿಂಗ್ ಕುರಿತ ಗೊಂದಲಗಳಿಗೆ ತೆರೆ ಎಳೆದ ಪೂಜಾ ಹೆಗ್ಡೆ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಕರಾವಳಿ ಬೆಡಗಿ ಪೂಜಾ ಹೆಗ್ಡೆ (Pooja Hegde) ಸದ್ಯ ‘ಕಿಸಿ ಕ ಭಾಯ್ ಕಿಸಿ ಕಿ ಜಾನ್’ ಸಿನಿಮಾದ ಪ್ರಚಾರ ಕಾರ್ಯದಲ್ಲಿ ಬ್ಯುಸಿಯಾಗಿದ್ದಾರೆ. ಈ ಸಿನಿಮಾದ ಪ್ರಚಾರ ಕಾರ್ಯದ ವೇಳೆ, ಸಲ್ಮಾನ್ ಖಾನ್ (Salman Khan) ಜೊತೆಗಿನ ಡೇಟಿಂಗ್ ಬಗ್ಗೆ ಪ್ರಶ್ನೆ ಎದುರಾಗಿದೆ.

‘ಕಿಸಿ ಕ ಭಾಯ್ ಕಿಸಿ ಕಿ ಜಾನ್’ ಚಿತ್ರದಲ್ಲಿ ಸಲ್ಮಾನ್ ಖಾನ್‌ಗೆ ನಾಯಕಿಯಾಗಿ ನಟಿಸಿದ್ದಾರೆ.

ಸಲ್ಮಾನ್ ಖಾನ್ ಅವರ ಹೆಸರು ಸಾಕಷ್ಟು ನಟಿಮಣಿಯರ ಜೊತೆ ತಳುಕು ಹಾಕಿಕೊಂಡಿದೆ. ಸಾಕಷ್ಟು ನಟಿಯರ ಜೊತೆ ಡೇಟ್ ಮಾಡಿದ್ದಾರೆ. ಮದುವೆವರೆಗೂ ಹೋಗಿ ಕೈ ತಪ್ಪಿದೆ. ಕೆಲ ತಿಂಗಳುಗಳಿಂದ ನಟಿ ಪೂಜಾ ಹೆಗ್ಡೆ ಜೊತೆ ಸಲ್ಮಾನ್ ಡೇಟ್ ಮಾಡ್ತಿದ್ದಾರೆ ಎಂಬ ಸುದ್ದಿ ಸಖತ್ ಸೌಂಡ್ ಮಾಡಿತ್ತು. ಈಗ ಈ ಬಗ್ಗೆ ನಟಿ ಮೌನ ಮುರಿದಿದ್ದಾರೆ.

ನಾನು ಸಿಂಗಲ್, ನನ್ನ ಕೆರಿಯರ್ ಮೇಲೆ ಸಂಪೂರ್ಣ ಗಮನ ಹರಿಸುತ್ತಿದ್ದೇನೆ ಎಂದು ಸಲ್ಮಾನ್ ಜೊತೆಗಿನ ಡೇಟಿಂಗ್ ಸುದ್ದಿಗೆ ಪೂಜಾ ಬ್ರೇಕ್ ಹಾಕಿದ್ದಾರೆ. ನನ್ನ- ಸಲ್ಮಾನ್ ಖಾನ್ ನಡುವೆ ಉತ್ತಮ ಸ್ನೇಹವಿದೆ ಅಷ್ಟೇ ಎಂದು ಸ್ಪಷ್ಟಪಡಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!