ಹೊಸದಿಗಂತ ಡಿಜಿಟಲ್ ಡೆಸ್ಕ್:
ಧರ್ಮಗುರು ಪೋಪ್ ಫ್ರಾನ್ಸಿಸ್ ಅವರು ಇಂದು ನಿಧನರಾಗಿದ್ದು. ಅವರ ಭಾರತಕ್ಕೆ ಭೇಟಿಯ ಕನಸು ನನಸಾಗದೇ ಉಳಿದಿದೆ.
ಕಳೆದ ಡಿಸೆಂಬರ್‌ನಲ್ಲಿ ವ್ಯಾಟಿಕನ್ ಸಿಟಿಗೆ ಭೇಟಿ ನೀಡಿದ್ದ ಕೇಂದ್ರ ಸಚಿವ ಜಾರ್ಜ್ ಕುರಿಯನ್, ಪೋಪ್ ಫ್ರಾನ್ಸಿಸ್ 2025ರ ನಂತರ ಭಾರತಕ್ಕೆ ಭೇಟಿ ನೀಡುವ ಸಾಧ್ಯತೆಯಿದೆ ಎಂದು ಹೇಳಿದ್ದರು.
ಪೋಪ್ ಜಾನ್ ಪಾಲ್ II ಅವರು 1986ರ ಫೆಬ್ರುವರಿಯಲ್ಲಿ ಭಾರತಕ್ಕೆ ಭೇಟಿ ನೀಡಿದ್ದರು. ದೇಶದ ವಿವಿಧ ಭಾಗಗಳಿಗೆ ಪ್ರವಾಸ ಕೈಗೊಂಡಿದ್ದ ಅವರು ಕೊಲ್ಕತ್ತದ ಮಿಷನರೀಸ್ ಆಫ್ ಚಾರಿಟಿಗೆ ಭೇಟಿ ನೀಡಿದ್ದರು.
1999ರಲ್ಲಿ ಪೋಪ್ ಜಾನ್ ಪಾಲ್ II ಅವರು ಕೊನೆಯದಾಗಿ ಭಾರತಕ್ಕೆ ಭೇಟಿ ನೀಡಿದ್ದರು. ಏಷ್ಯಾದ ಬಿಷಪ್‌ಗಳ ಸಿನೊಡ್‌ನ ವಿಶೇಷ ಸಭೆಯ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಲು ನವದೆಹಲಿಗೆ ಬಂದಿದ್ದ ಅವರು, ಆಗಿನ ಉಪರಾಷ್ಟ್ರಪತಿ ಕೃಷ್ಣಕಾಂತ್ ಮತ್ತು ಅಂದಿನ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರನ್ನು ಭೇಟಿ ಮಾಡಿದ್ದರು.
2021ರ ಅಕ್ಟೋಬರ್‌ನಲ್ಲಿ ರೋಮ್‌ನಲ್ಲಿ ನಡೆದ ಜಿ20 ಶೃಂಗಸಭೆಯ ಸಂದರ್ಭದಲ್ಲಿ ಪ್ರಧಾನಿ ಮೋದಿ ಪೋಪ್ ಫ್ರಾನ್ಸಿಸ್ ಅವರನ್ನು ಮೊದಲ ಬಾರಿ ಭೇಟಿಯಾಗಿದ್ದರು. ಈ ವೇಳೆ ಪ್ರಧಾನಿ ಮೋದಿ ಪೋಪ್ ಫ್ರಾನ್ಸಿಸ್ ಅವರನ್ನು ಭಾರತಕ್ಕೆ ಭೇಟಿ ನೀಡುವಂತೆ ಆಹ್ವಾನ ನೀಡಿದ್ದರು.
2024ರ ಜೂನ್‌ನಲ್ಲಿ ಇಟಲಿಯ ಅಪುಲಿಯಾದಲ್ಲಿ ನಡೆದ ಜಿ 7 ಶೃಂಗಸಭೆಯ ಸಂದರ್ಭದಲ್ಲಿ ಪೋಪ್ ಫ್ರಾನ್ಸಿಸ್ ಅವರನ್ನು ಭೇಟಿಯಾದ ಪ್ರಧಾನಿ ಮೋದಿ ಭಾರತಕ್ಕೆ ಭೇಟಿ ನೀಡುವಂತೆ ಆಹ್ವಾನಿಸಿದ್ದರು.