ಲೋಕಸಭೆಯಲ್ಲಿ ಇಂದು ಹಣಕಾಸು ಮಸೂದೆ -2023ಕ್ಕೆ ಅಂಗೀಕಾರ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಲೋಕಸಭೆಯಲ್ಲಿ ಇಂದು ಕೆಲವು ತಿದ್ದುಪಡಿಗಳ ಜೊತೆಗೆ ಹಣಕಾಸು ಮಸೂದೆ -2023ಕ್ಕೆ ಅಂಗೀಕಾರ ದೊರಕಿದೆ.

ಅದಾನಿವಿರುದ್ಧ ಜೆಪಿಸಿ ತನಿಖೆಗೆ ಆಗ್ರಹಿಸಿ ವಿರೋಧ ಪಕ್ಷದ ಸಂಸದರು ಘೋಷಣೆಗಳು ಕೂಗಿ ವಿರೋಧ ವ್ಯಕ್ತಪಡಿಸುತ್ತಿರುವ ಸಂದರ್ಭದಲ್ಲೇ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಲೋಕಸಭೆಯಲ್ಲಿ’ಹಣಕಾಸು ಮಸೂದೆ 2023′ ಅನ್ನು ಮಂಡಿಸಿದರು.

ಫೆ.1ರಂದು ಕೇಂದ್ರ ಬಜೆಟ್ ಜೊತೆಗೆ ಮಂಡನೆಯಾದ ಈ ಹಣಕಾಸು ಮಸೂದೆಗೆ ಹಣಕಾಸು ಸಚಿವೆ 64 ಅಧಿಕೃತ ತಿದ್ದುಪಡಿಗಳನ್ನು ಮಾಡಿದ್ದಾರೆ.

ಈ ಹಣಕಾಸು ಮಸೂದೆಯಲ್ಲಿನ ಅಂಶಗಳು 2023-24ನೇ ಸಾಲಿಗೆ ಅನ್ವಯಿಸಲಿವೆ. ಪಿಂಚಣಿ ವ್ಯವಸ್ಥೆಯ ಹಣಕಾಸು ಕಾರ್ಯದರ್ಶಿ ನೇತೃತ್ವದಲ್ಲಿ ಉದ್ಯೋಗಿಗಳ ಬೇಡಿಕೆಗಳನ್ನು ಪರಿಹರಿಸಲು ಹಾಗೂ ಸಾಮಾನ್ಯ ನಾಗರಿಕರ ಆರ್ಥಿಕ ಸಂರಕ್ಷಣೆಗೆ ಸಮಿತಿಯೊಂದನ್ನು ರಚಿಸಲಾಗುವುದು ಎಂದು ಹಣಕಾಸು ಸಚಿವೆ ತಿಳಿಸಿದ್ದಾರೆ. ಇನ್ನು ಲೋಕಸಭೆಯಲ್ಲಿ ಈ ಮಸೂದೆ ಮಂಡನೆ ಸಂದರ್ಭದಲ್ಲಿ ವಿದೇಶಿ ಪ್ರವಾಸದ ಸಂದರ್ಭದಲ್ಲಿ ಕ್ರೆಡಿಟ್ ಕಾರ್ಡ್ ಮೂಲಕ ಮಾಡಿದ ಪಾವತಿಗಳು ಮೂಲದಲ್ಲೇ ತೆರಿಗೆಯಿಂದ ತಪ್ಪಿಸಿಕೊಳ್ಳುತ್ತಿರುವ ಪ್ರಕರಣಗಳಿಗೆ ಸಂಬಂಧಿಸಿ ಆರ್ ಬಿಐ ಪರಿಶೀಲನೆ ನಡೆಸಲಿದೆ ಎಂದು ಹಣಕಾಸು ಸಚಿವೆ ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!