ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಅವರು ಮುಂಬೈ ಲೋಕಲ್ (Mumbai Local Train) ರೈಲಿನಲ್ಲಿ ಪ್ರಯಾಣಿಸಿದ್ದಾರೆ.
ಮುಂಬೈನ ಘಟ್ಕೋಪರ್‌ನಿಂದ ಥಾಣೆಯ ಕಲ್ಯಾಣ್‌ವರೆಗೆ ಕೇಂದ್ರ ಸಚಿವೆ ಪ್ರಯಾಣಿಸಿದ್ದು, ರೈಲಿನಲ್ಲಿ ಪ್ರಯಾಣಿಕರೊಂದಿಗೆ ಉಭಯ ಕುಶಲೋಪರಿ ನಡೆಸಿದ್ದಾರೆ.
ಕೆಲ ಪ್ರಯಾಣಿಕರು, ರೈಲ್ವೆ ಸಿಬ್ಬಂದಿಯು ನಿರ್ಮಲಾ ಸೀತಾರಾಮನ್ ಅವರೊಂದಿಗೆ ಸೆಲ್ಫಿ ತೆಗೆದುಕೊಂಡಿದ್ದಾರೆ.
ಪ್ರಯಾಣಿಕರೊಂದಿಗೆ ನಿರ್ಮಲಾ ಸೀತಾರಾಮನ್ ಮಾತುಕತೆ ನಡೆಸಿದರು. ಜೊತೆಗೆ ಸೆಲ್ಫಿಗೆ ಪೋಸ್ ನೀಡಿದರು. ಪ್ರಯಾಣಿಕರ ಯೋಗ-ಕ್ಷೇಮ ವಿಚಾರಿಸಿದರು.