ರಾಜ್ಯ ಸರಕಾರದಿಂದ ಕಂಬಳಕ್ಕೆ ಹಣಕಾಸಿನ ನೆರವು: ಬಂಟ್ವಾಳದಲ್ಲಿ ಸಿಎಂ ಸಿದ್ದರಾಮಯ್ಯ ಭರವಸೆ

ಹೊಸದಿಗಂತ ವರದಿ,ಬಂಟ್ವಾಳ: ಅವಿಭಜಿತ ದ.ಕ.ಜಿಲ್ಲೆಯಲ್ಲಿ ನಡೆಯುವ ಕಂಬಳ ಜಾತ್ಯಾತೀತ,ದರ್ಮಾತೀತವಾಗಿ ಭಾಗವಹಿಸುವ ಜನಪ್ರಿಯ ಕ್ರೀಡೆಯಾಗಿದ್ದು, ಇದನ್ನು ಉಳಿಸಿ ಬೆಳೆಸುವುದು ನಮ್ಮ ಜವಾಬ್ದಾರಿ. ಈ ನಿಟ್ಟಿನಲ್ಲಿ ನಮ್ಮ ಸರಕಾರ ಕಂಬಳಕ್ಕೆ ಪ್ರೋತ್ಸಾಹ, ಬೆಂಬಲದ ಜತೆಗೆ ಹಣಕಾಸಿನ ನೆರವನ್ನೂ ಕೊಡ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಬಂಟ್ವಾಳ ತಾಲೂಕಿನ ನಾವೂರು ಗ್ರಾಮದ ಕೂಡಿಬೈಲಿನಲ್ಲಿ ಶನಿವಾರ ಆರಂಭಗೊಂಡ 15 ನೇ ವರ್ಷದ “ಮೂಡೂರು-ಪಡೂರು” ಜೋಡುಕರೆ ಬಯಲು ಕಂಬಳಕೂಟದಲ್ಲಿ ಸಂಜೆ ನಡೆದ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ರಾಜಕೀಯ ಪ್ರಜಾಪ್ರಭುತ್ವದ ಜತೆಯಲ್ಲಿ ಸಾಮಾಜಿಕ … Continue reading ರಾಜ್ಯ ಸರಕಾರದಿಂದ ಕಂಬಳಕ್ಕೆ ಹಣಕಾಸಿನ ನೆರವು: ಬಂಟ್ವಾಳದಲ್ಲಿ ಸಿಎಂ ಸಿದ್ದರಾಮಯ್ಯ ಭರವಸೆ