ಆರ್ಥಿಕ ಬಿಕ್ಕಟ್ಟು: ಅಮೆರಿಕದ ಸಿಲಿಕಾನ್ ವ್ಯಾಲಿ ಬ್ಯಾಂಕ್ ಬಂದ್!

ಹೊಸದಿಗಂತ ಡಿಜಿಟಲ್‌ ಡೆಸ್ಕ್ ‌:

ಸ್ಟಾರ್ಟ್‌ಅಪ್‍ಗಳಿಗೆ ಸಾಲ ನೀಡಲು ಹೆಸರುವಾಸಿಯಾದ ಅಮೆರಿಕದ ಸಿಲಿಕಾನ್ ವ್ಯಾಲಿ ಬ್ಯಾಂಕ್ (Silicon Valley Bank) ತನ್ನ ವ್ಯವಹಾರವನ್ನು ತಾತ್ಕಾಲಿಕವಾಗಿ ಬಂದ್ ಮಾಡಿದೆ.

ಸಿಲಿಕಾನ್ ವ್ಯಾಲಿ ಬ್ಯಾಂಕ್‍ನ ಠೇವಣಿದಾರರು ಹಾಗೂ ಹೂಡಿಕೆದಾರರು ಬರೋಬ್ಬರಿ 282 ಲಕ್ಷ ಕೋಟಿ ರೂ. (42 ಬಿಲಿಯನ್ ಯುಎಸ್ ಡಾಲರ್) ಬೃಹತ್ ಮೊತ್ತದ ಹಣವನ್ನು ಹಿಂಪಡೆದ ಪರಿಣಾಮ ಬ್ಯಾಂಕ್‍ನ ನಗದು ವ್ಯವಹಾರದಲ್ಲಿ ಕೊರತೆ ಕಂಡುಬಂದಿತ್ತು. ಈ ಕಾರಣದಿಂದಾಗಿ ಬ್ಯಾಂಕ್ ವ್ಯವಹಾರವನ್ನು ತಾತ್ಕಾಲಿಕವಾಗಿ ಬಂದ್ ಮಾಡಲಾಗಿದೆ.

ಕ್ಯಾಲಿಫೋರ್ನಿಯಾ ಬ್ಯಾಂಕಿಂಗ್ ಅಧಿಕಾರಿಗಳು ಶುಕ್ರವಾರ ಸಿಲಿಕಾನ್ ವ್ಯಾಲಿ ಬ್ಯಾಂಕ್ ಅನ್ನು ಮುಚ್ಚಿದ್ದಾರೆ. 2008ರ ಜಾಗತಿಕ ಆರ್ಥಿಕ ಬಿಕ್ಕಟ್ಟಿನ ನಂತರ ಇದು ಅತಿದೊಡ್ಡ ಬ್ಯಾಂಕಿಂಗ್‍ನ ವೈಫಲ್ಯವಾಗಿದೆ.

ಎಸ್‍ವಿಬಿ ಮಾತೃ ಸಂಸ್ಥೆಯಾದ ಎಸ್‍ವಿಬಿ ಫೈನಾನ್ಸಿಯಲ್ ಗ್ರೂಪ್, ತನ್ನ ಭಾಗವಾಗಿರುವ 21 ಬಿಲಿಯನ್ ಡಾಲರ್‍ನಷ್ಟು ಮೌಲ್ಯದ ಬಾಂಡ್ಸ್ ಮತ್ತು ಡಿಬೆಂಚರ್ಸ್ ಅನ್ನು ಮಾರಾಟ ಮಾಡುವುದಾಗಿ ಘೋಷಿಸಿದ ಬೆನ್ನಲ್ಲೇ ಹೂಡಿಕೆದಾರರು ಮತ್ತು ಠೇವಣಿದಾರರಲ್ಲಿ ಆತಂಕ ಹುಟ್ಟಿಸಲು ಕಾರಣವಾಗಿತ್ತು. ಇದರ ಮುಂದುವರಿದ ಭಾಗವಾಗಿ ಸಿಲಿಕಾನ್ ವ್ಯಾಲಿ ಬ್ಯಾಂಕ್‍ನ ಗ್ರಾಹಕರು ಭಾರೀ ಪ್ರಮಾಣದ ಠೇವಣಿ ಹಿಂಪಡೆದಿದ್ದು, ಸ್ಟಾರ್ಟ್‍ಅಪ್ ಇಂಡಸ್ಟ್ರಿ ಮೇಲೆ ದೊಡ್ಡ ಹೊಡೆತ ಬಿದ್ದಿದೆ.

ಇದರಿಂದಾಗಿ ಸಿಲಿಕಾನ್ ವ್ಯಾಲಿ ಬ್ಯಾಂಕ್‍ನಲ್ಲಿ ಆರ್ಥಿಕ ಕುಸಿತ ಉಂಟಾಗಿದೆ ಎಂಬ ಸುದ್ದಿ ಹೊರಬೀಳುತ್ತಿದ್ದಂತೆಯೇ ಎಸ್‍ವಿಬಿ ಷೇರು ಮೌಲ್ಯ ಕುಸಿತ ಕಂಡಿತ್ತು. ಇದರ ಪರಿಣಾಮವಾಗಿ 80 ಬಿಲಿಯನ್ ಡಾಲರ್ ನಷ್ಟ ಅನುಭವಿಸಿದೆ.

ಸೋಮವಾರ ಬೆಳಗ್ಗೆ ಬ್ಯಾಂಕ್‍ನ ಎಲ್ಲ ಶಾಖೆಗಳನ್ನು ತೆರೆದ ನಂತರ ಅವರು ವಿಮೆ ಮಾಡಿದ ಠೇವಣಿಗಳನ್ನು ವಾಪಸ್ ನೀಡುವುದಾಗಿ ಠೇವಣಿದಾರರಿಗೆ ಎಫ್‍ಡಿಐಸಿ ಭರವಸೆ ನೀಡಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!