ಹಿಮಾಚಲ ಸರ್ಕಾರದಲ್ಲಿ ಆರ್ಥಿಕ ಸಂಕಷ್ಟ: ವಿದ್ಯುತ್ ಸಬ್ಸಿಡಿ ವಾಪಸ್ ಅಭಿಯಾನ ಶುರು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಹಿಮಾಚಲ ಸರ್ಕಾರವು ತನ್ನ ನಾಗರಿಕರಿಗೆ ಖಾತರಿ ಯೋಜನೆಯನ್ನು ಒದಗಿಸಿದೆ ಆದರೆ ಈಗ ಆರ್ಥಿಕ ಸಮಸ್ಯೆಗಳನ್ನು ಎದುರಿಸುತ್ತಿದೆ. ಹೀಗಾಗಿ ರಾಜ್ಯದಲ್ಲಿ ವಿದ್ಯುತ್ ಸಬ್ಸಿಡಿ ರದ್ದುಪಡಿಸುವಂತೆ ಚಳವಳಿ ಆರಂಭಿಸಲಾಗಿದೆ.

ಈ ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಮುಖ್ಯಮಂತ್ರಿ ಸುಖ್ವೀಂದರ್ ಸಿಂಗ್, ಹಣಕಾಸಿನ ಸಮಸ್ಯೆಗಳಿಂದಾಗಿ ಸರ್ಕಾರದ ಹಣವನ್ನು ಉಳಿಸಲು ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ ಮತ್ತು ಜನರು ವಿದ್ಯುತ್ ಸಬ್ಸಿಡಿಯನ್ನು ತ್ಯಜಿಸುವಂತೆ ಕೇಳಿಕೊಂಡರು.

ಮುಖ್ಯಮಂತ್ರಿ ಸುಖ್ವೀಂದರ್ ಸಿಂಗ್ ಸುಖು ಅವರು ತಮ್ಮ ಹೆಸರಿನಲ್ಲಿ ನೋಂದಣಿಯಾಗಿದ್ದ ವಿದ್ಯುತ್ ಸಬ್ಸಿಡಿ ವಾಪಸ್ ನೀಡಿದ್ದಾರೆ. ಅಲ್ಲದೇ ಇತರೆ ಅರ್ಹರಿಗೂ ಸಬ್ಸಿಡಿ ಯೋಜನೆಯಿಂದ ಹಿಂದೆ ಸರಿಯುವಂತೆ ಕರೆ ನೀಡಿದ್ದಾರೆ.

ಒಟ್ಟು ತಮ್ಮ ಹೆಸರಿನಲ್ಲಿ ನೋಂದಣಿಯಾಗಿದ್ದ 5 ವಿದ್ಯುತ್ ಸಂಪರ್ಕಗಳಿಗೆ ಸಿಗುತ್ತಿದ್ದ ಸಬ್ಸಿಡಿಯನ್ನು ಹಿಂದಿರುಗಿಸಿದ್ದು, ರಾಜ್ಯದ ಅಭಿವೃದ್ಧಿ ದೃಷ್ಟಿಯಿಂದ ಬಹುವಿದ್ಯುತ್ ಸಂಪರ್ಕವನ್ನು ಹೊಂದಿರುವ ಜನರು, ಸಬ್ಸಿಡಿಯನ್ನು ವಾಪಸ್ ನೀಡುವಂತೆ ಕೋರಿದ್ದಾರೆ.

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!