ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯ ಸರ್ಕಾರ ಹಣಕಾಸು ನಿರ್ವಹಣೆಯಲ್ಲಿ ಸಂಪೂರ್ಣ ವಿಫಲವಾಗಿದ್ದು, ರಾಜ್ಯ ಆರ್ಥಿಕ ಸಂಕಷ್ಟದತ್ತ ಸಾಗಿದೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಆದಾಯ ಕ್ರೋಢೀಕರಣಕ್ಕೆ ಒತ್ತು ನೀಡದೆ ಬರೀ ಗ್ಯಾರೆಂಟಿ ಯೋಜನೆಗಳ ಜಾರಿ ಬಗ್ಗೆ ಕಾಂಗ್ರೆಸ್ ಯೋಚಿಸುತ್ತಿದೆ. ಇದರಿಂದಾಗಿ ರಾಜ್ಯವನ್ನು ಸಾಲದ ಸುಳಿಯಲ್ಲಿ ಸಿಲುಕಿಸುತ್ತಿದೆ ಎಂದಿದ್ದಾರೆ.
ತಮ್ಮ ವೈಫಲ್ಯ ಮುಚ್ಚಿಕೊಳ್ಳಲು ಕೇಂದ್ರದ ವಿರೋಧವಾಗಿ ಸಿದ್ದರಾಮಯ್ಯ ಮಾತನಾಡಿದ್ದಾರೆ. ಲೆಕ್ಕಾಚಾರ ಸರಿಯಾಗಿಲ್ಲದೆ ಸರ್ಕಾರ ನಡೆಸುವುದು ಕಷ್ಟ. ಇನ್ನು ಏಳನೇ ವೇತನ ಆಯೋಗ ಜಾರಿಯಾದರೆ ೨೦ ಸಾವಿರ ಕೋಟಿ ರೂಪಾಯಿಗಳು ಬೇಕಾಗುತ್ತದೆ. ಬಜೆಟ್‌ನಲ್ಲಿ ಇದಕ್ಕೆ ಹಣ ಎತ್ತಿಟ್ಟಿಲ್ಲ. ಆದರೂ ಜಾರಿ ಮಾಡುವ ಭರವಸೆ ನೀಡಿದ್ದಾರೆ. ಬರೀ ಗ್ಯಾರೆಂಟಿಗಳಿಗೇ ಹಣ ಸುರಿದರೆ ಅಭಿವೃದ್ಧಿ ಹೇಗೆ ಸಾಧ್ಯ ಎಂದಿದ್ದಾರೆ.