spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Saturday, September 18, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ತಮ್ಮ ಕಚೇರಿಯಲ್ಲೇ ಬರ್ಬರವಾಗಿ ಕೊಲೆಯಾದ ಡ್ರೀಮ್ ಫೈನಾನ್ಸ್ ಮಾಲೀಕ

- Advertisement -Nitte

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..

ಹೊಸದಿಗಂತ ವರದಿ, ಉಡುಪಿ:

ಜಿಲ್ಲೆಯ ಕುಂದಾಪುರ ತಾಲೂಕಿನ ಸಲ್ವಾಡಿ ಎಂಬಲ್ಲಿ ಫೈನಾನ್ಶಿಯರ್ ಒಬ್ಬರ ಕೊಲೆಯಾಗಿದೆ.
ಯಡಾಡಿ ಮತ್ಯಾಡಿ ಕೂಡಲ್ ನಿವಾಸಿ, ಡ್ರೀಮ್ ಫೈನಾನ್ಸ್ ಮಾಲೀಕ ಅಜೇಂದ್ರ ಶೆಟ್ಟಿ (33) ಕೊಲೆಗೀಡಾದವರು.
ಕುಂದಾಪುರದ ತಾಲೂಕಿನ ಕಂಡ್ಲೂರು ಪೊಲೀಸ್ ಠಾಣಾ ವ್ಯಾಪ್ತಿಯ ಸಳ್ವಾಡಿಯಲ್ಲಿ ತಡರಾತ್ರಿ ದುಷ್ಕರ್ಮಿಗಳು ಅವರನ್ನು ಬರ್ಬರವಾಗಿ ಹತ್ಯೆಗೈದು ಪರಾರಿಯಾಗಿದ್ದಾರೆ. ಅಜೇಂದ್ರ ಶೆಟ್ಟಿ ತಡರಾತ್ರಿಯವರೆಗೆ ಮನೆಗೆ ವಾಪಾಸ್ಸಾಗಿರಲಿಲ್ಲ. ಮನೆಯವರು ಹುಡುಕಾಟ ಪ್ರಾರಂಭಿಸಿ, ಎಲ್ಲೂ ಕಾಣಿಸದಿದ್ದಾಗ, ಆತನ ಸ್ನೇಹಿತರು ಫೈನಾನ್ಸ್ ಗೆ ಹೋಗಿದ್ದಾರೆ. ಕಚೇರಿ ಒಳಗೆ ಬರ್ಬರವಾಗಿ ಕೊಲೆಯಾದ ಸ್ಥಿತಿಯಲ್ಲಿ ಅಜೇಂದ್ರ ಪತ್ತೆಯಾಗಿದ್ದಾರೆ ಎಂಬ ಮಾಹಿತಿಯಿದೆ.
ಕುಂದಾಪುರ ಗ್ರಾಮಾಂತರ ಕಂಡ್ಲೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.
ಕಳೆದ ಏಳು ವರ್ಷಗಳಿಂದ ಸಳ್ವಾಡಿಯಲ್ಲಿ ಅಜೇಂದ್ರ ಫೈನಾನ್ಸ್ ನಡೆಸುತ್ತಿದ್ದರು. ವ್ಯವಹಾರ ವಿಚಾರದಲ್ಲಿ ನಡೆದಿರುವ ಕೊಲೆಯೆಂದು ಮೇಲ್ನೋಟಕ್ಕೆ ಅಂದಾಜಿಸಲಾಗಿದೆ. ಕೊಲೆಯ ಹಿಂದಿನ ನಿಖರ ಕಾರಣ ಪೊಲೀಸ್ ತನಿಖೆಯಿಂದ ಬೆಳಕಿಗೆ ಬರಬೇಕಾಗಿದೆ

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss