ಶೌಚಾಲಯದಲ್ಲಿ ಮೃತದೇಹ ಪತ್ತೆ

ಹೊಸದಿಗಂತ ವರದಿ,ಸುಂಟಿಕೊಪ್ಪ:

ಸುಂಟಿಕೊಪ್ಪದ ಮಾರುಕಟ್ಟೆ ಆವರಣದ ಸಾರ್ವಜನಿಕ ಶೌಚಾಲಯದಲ್ಲಿ ಮೃತ ದೇಹವೊಂದು ಪತ್ತೆಯಾಗಿದೆ.
ಈ ಬಗ್ಗೆ ಸಾರ್ವಜನಿಕರು ದೂರು ನೀಡಿದ ಮೇರೆಗೆ ಸುಂಟಿಕೊಪ್ಪ ಠಾಣಾಧಿಕಾರಿ ಮಂಜು ಹಾಗೂ ಸಿಬ್ಬಂದಿಗಳು ಸ್ಥಳ ಪರಿಶೀಲಿಸಿದಾಗ ಮೃತರು ಬೋಯಿಕೇರಿ ನಿವಾಸಿ ವೆಂಕಟೇಶ (52) ಎಂಬುದಾಗಿ ಪತ್ತೆಯಾಗಿದೆ.
ವ್ಯಕ್ತಿಯು ತೀವ್ರ ಪಾನಮತ್ತರಾಗಿದ್ದರೆನ್ನಲಾಗಿದ್ದು, ಇದರಿಂದ ಸಾವನ್ನಪ್ಪಿರಬಹುದೆಂದು ಶಂಕಿಸಲಾಗಿದೆ.
ಸುಂಟಿಕೊಪ್ಪ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮಕೈಗೊಂಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!