ಮೆಟ್ರೋ ಪ್ರಯಾಣ​ ದರ ಏರಿಕೆ ವಿರುದ್ಧ ಪ್ರತಿಭಟನೆ ಮಾಡಿದ ಎಬಿವಿಪಿ ಕಾರ್ಯಕರ್ತರ ವಿರುದ್ಧ ಎಫ್‌ಐಆರ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ನಮ್ಮ ಮೆಟ್ರೋ ಪ್ರಯಾಣ ದರ ದುಪ್ಪಟ್ಟು ಏರಿಕೆಗೆ ಸಾರ್ವಜನಿಕರಿಂದ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದ್ದು, ಶನಿವಾರ ದರ ಏರಿಕೆ ಖಂಡಿಸಿ ಎಬಿವಿಪಿ ಪ್ರತಿಭಟನೆ ನಡೆಸಿತು.

ಅನುಮತಿ ಪಡೆಯದೆ ನಾಡಪ್ರಭು ಕೆಂಪೇಗೌಡ(ಮೆಜೆಸ್ಟಿಕ್) ಮೆಟ್ರೋ ನಿಲ್ದಾಣದ ಬಳಿ ಪ್ರತಿಭಟನೆ ನಡೆಸಿದ ಯ 16 ಎಬಿವಿಪಿ ಕಾರ್ಯಕರ್ತರ ವಿರುದ್ಧ ಕಾಟನ್​ಪೇಟೆ ಪೊಲೀಸ್​ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

ಈಗಾಗಲೇ ಮೆಟ್ರೋ ದರ ಏರಿಕೆ ವಿರುದ್ಧ ಪ್ರಯಾಣಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಬಿಎಂಆರ್​ಸಿಎಲ್ ಸ್ಟೇಜ್ ಆಧಾರದಲ್ಲಿ ಸ್ವಲ್ಪ ಇಳಿಕೆ ಮಾಡಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!