ಹೊಸದಿಗಂತ ಡಿಜಿಟಲ್ ಡೆಸ್ಕ್:
ನಟ ಧ್ರುವ ಸರ್ಜಾ ಅವರ ವಿರುದ್ಧ 3 ಕೋಟಿ ರೂಪಾಯಿಗಳ ವಂಚನೆ ಆರೋಪ ಕೇಳಿಬಂದಿದೆ. ‘ಜಗ್ಗು ದಾದ’ ಚಿತ್ರದ ನಿರ್ಮಾಪಕ ರಾಘವೇಂದ್ರ ಹೆಗ್ಡೆ ಅವರು ಮುಂಬೈನಲ್ಲಿ ದೂರು ದಾಖಲಿಸಿದ್ದಾರೆ.
2019ರಲ್ಲಿ ಚಿತ್ರ ನಿರ್ಮಾಣಕ್ಕಾಗಿ ಧ್ರುವ ಅವರಿಗೆ 3 ಕೋಟಿ ರೂಪಾಯಿ ನೀಡಿದ್ದರು ಎಂದು ಹೇಳಿದ್ದಾರೆ. ಆದರೆ, ಧ್ರುವ ಅವರು ಚಿತ್ರದಿಂದ ಹಿಂದೆ ಸರಿದಿದ್ದಾರೆ ಮತ್ತು ಹಣವನ್ನು ಮರುಪಾವತಿಸಿಲ್ಲ ಎಂದು ಆರೋಪಿಸಲಾಗಿದೆ.
‘2016ರಲ್ಲಿ ನನ್ನ ಮೊದಲ ಸಿನಿಮಾ ಜಗ್ಗುದಾದ ಯಶಸ್ಸು ಕಂಡಿತು. ಈ ವೇಳೆ ಧ್ರುವ ಸರ್ಜಾ ಅವರು ನನ್ನ ಕಚೇರಿಗೆ ಬಂದು ಸಿನಿಮಾ ಮಾಡುವ ಆಸಕ್ತಿ ತೋರಿಸಿದ್ದರು. 2016ರಿಂದ 2018ರವರೆಗೆ ಅವರು ಈ ವಿಚಾರದಲ್ಲಿ ತುಂಬಾನೇ ಆಸಕ್ತಿ ತೋರಿಸುತ್ತಿದ್ದರು. ದಿ ಸೋಲ್ಜರ್ ಹೆಸರಿನ ಸಿನಿಮಾದ ಸ್ಕ್ರಿಪ್ಟ್ ಕೂಡ ನೀಡಿದರು’ ಎಂದು ರಾಘವೇಂದ್ರ ಹೆಗ್ಡೆ ಅಂಬೋಲಿ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.