ಚಿಕ್ಕಮಗಳೂರಿನಲ್ಲಿ ಪ್ರತಿಭಟನಾನಿರತ ಬಿಜೆಪಿ ಕಾರ್ಯಕರ್ತರ ಮೇಲೆ ಎಫ್‌ಐಆರ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಪ್ರಧಾನಿ ಮೋದಿ ಎನ್ನುವ ಯುವಕರ ಕೆನ್ನೆಗೆ ಹೊಡೆಯಿರಿ ಎಂದು ಸಚಿವ ಶಿವರಾಜ್‌ ತಂಗಡಗಿ ಹೇಳಿಕೆ ನೀಡಿದ್ದರು, ಈ ಹೇಳಿಕೆಯನ್ನು ವಿರೋಧಿಸಿ ಸಚಿವ ಜೆ.ಜೆ ಜಾರ್ಜ್‌ ನೇತೃತ್ವದಲ್ಲಿ ನಡೆಯುತ್ತಿದ್ದ ಕಾಂಗ್ರೆಸ್‌ ಕಾರ್ಯಕರ್ತರ ಸಭೆಗೆ ಮುತ್ತಿಗೆ ಹಾಕಲು ಯತ್ನಿಸಿದ್ದ ಬಿಜೆಪಿ ಕಾರ್ಯಕರ್ತರ ವಿರುದ್ಧ ಚುನಾವಣಾ ಅಧಿಕಾರಿಗಳು ದೂರು ದಾಖಲಿಸಿದ್ದಾರೆ.

ಚಿಕ್ಕಮಗಳೂರಿನಲ್ಲಿ ಘಟನೆ ನಡೆದಿದ್ದು, ನೀತಿ ಸಂಹಿತೆ ಜಾರಿಯಾಗಿದ್ದರೂ ಪ್ರತಿಭಟನೆ ನಡೆಸಿದ ಕಾರಣ ಚುನಾವಣಾ ಅಧಿಕಾರಿಗಳ ದೂರಿನ ಆಧಾರದ ಮೇಲೆ 15ಕ್ಕೂ ಹೆಚ್ಚು ಬಿಜೆಪಿ ಕಾರ್ಯಕರ್ತರ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ.

ಮೋದಿ ಸರ್ಕಾರ ಪ್ರತಿವರ್ಷ ಎರಡು ಕೋಟಿ ಉದ್ಯೋಗ ಸೃಷ್ಟಿಸುತ್ತೇವೆ ಎಂದು ಹೇಳಿತ್ತು. ಆದರೆ, ಉದ್ಯೋಗ ಕೊಡಿ ಎಂದರೆ ಪಕೋಡ ಮಾರಿ ಎನ್ನುತ್ತಾರೆ ಮೋದಿ. ಹತ್ತು ವರ್ಷದಲ್ಲಿ ಇಪ್ಪತ್ತು ಕೋಟಿ ಯುವಕರಿಗೆ ಉದ್ಯೋಗ ಸಿಗಬೇಕಿತ್ತು. ಆದರೆ ಮೋದಿ ಸರ್ಕಾರ ಭರವಸೆ ಈಡೇರಿಸಿಲ್ಲ. ನೀಡಿದ ಭರವಸೆಯಂತೆ ಉದ್ಯೋಗ ಸೃಷ್ಟಿ ಮಾಡದ ಕಾರಣ ‘ಮೋದಿ ಮೋದಿ’ ಅಂತ ಕೂಗುವ ವಿದ್ಯಾರ್ಥಿಗಳು ಮತ್ತು ಯುವಕರ ಅವರ ಕಪಾಳಕ್ಕೆ ಹೊಡೆಯಿರಿ ಎಂದು ಹೇಳಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!