ಒಕ್ಕಲಿಗ ಮಠದ ಚಂದ್ರಶೇಖರ ಸ್ವಾಮೀಜಿ ವಿರುದ್ಧ ಎಫ್ಐಆರ್: ಖುದ್ದು ಹಾಜರಾಗುವಂತೆ ಸೂಚನೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಒಕ್ಕಲಿಗ ಸಮುದಾಯದ ಚಂದ್ರಶೇಖರ ಸ್ವಾಮೀಜಿಗೆ ಬೆಂಗಳೂರಿನ ಉಪ್ಪಾರಪೇಟೆ ಠಾಣೆ ಪೊಲೀಸರು ನೋಟಿಸ್ ನೀಡಿದ್ದಾರೆ. ಡಿಸೆಂಬರ್ 2 ರಂದು ಪೊಲೀಸ್ ಠಾಣೆಗೆ ಖುದ್ದು ಹಾಜರಾಗುವಂತೆ ನೊಟೀಸ್‌ನಲ್ಲಿ ಸ್ವಾಮೀಜಿಗೆ ಸೂಚನೆ ನೀಡಲಾಗಿದೆ.

ನವೆಂಬರ್ 26ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ವಕ್ಫ್ ವಿರುದ್ಧದ ಹೋರಾಟದ ವೇಳೆ ಚಂದ್ರಶೇಖರ್ ಸ್ವಾಮೀಜಿ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಮುಸ್ಲಿಮರಿಗೆ ಮತದಾನದ ಹಕ್ಕು ಇಲ್ಲದಂತೆ ಮಾಡಬೇಕು ಅಂತ ಹೇಳಿದ್ದರು.

ಇನ್ನು ಸ್ವಾಮೀಜಿ ಹೇಳಿಕೆ ವಿರುದ್ಧ ಆಕ್ರೋಶ ವ್ಯಕ್ತವಾಗಿತ್ತು. ಬಳಿಕ ಎಚ್ಚೆತ್ತ ಸ್ವಾಮೀಜಿ ತಮ್ಮ ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ್ದರು. ಈ ಬಗ್ಗೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿ, ಚಂದ್ರಶೇಖರ ಸ್ವಾಮೀಜಿ ವಿಷಾದ ವ್ಯಕ್ತಪಡಿಸಿದ್ದರು. ಮುಸಲ್ಮಾನರೂ ಸಹ ಈ ದೇಶದ ಪ್ರಜೆಗಳೇ. ಎಲ್ಲರಂತೆ ಅವರಿಗೂ ಮತದಾನದ ಹಕ್ಕು ಇರುತ್ತದೆ. ನಾನು ಬಾಯಿ ತಪ್ಪಿ ನೀಡಿದ ಹೇಳಿಕೆಯಿಂದ ಮುಸಲ್ಮಾನ ಸಹೋದರರಿಗೆ ಬೇಸರವಾಗಿದ್ದರೆ, ಅದಕ್ಕಾಗಿ ಹೃತ್ಪೂರ್ವಕವಾಗಿ ವಿಷಾದ ವ್ಯಕ್ತಪಡಿಸುತ್ತೇನೆ ಅಂತ ಹೇಳಿದ್ದರು.

ಇನ್ನು ಸ್ವಾಮೀಜಿ ವಿರುದ್ಧ ಸೈಯದ್ ಅಬ್ಬಾಸ್ ಎಂಬುವರು ಉಪ್ಪಾರಪೇಟೆ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಧರ್ಮ ಧರ್ಮಗಳ‌ ಮಧ್ಯೆ ವೈರತ್ವ ಉಂಟು ಮಾಡುವ ಪ್ರಚೋದನೆ ಮಾಡಿದ ಆರೋಪ ಮಾಡಿ, ದೂರು ನೀಡಿದ್ದರು.

ಇನ್ನು ಸೈಯದ್ ಅಬ್ಬಾಸ್ ನೀಡಿದ ದೂರಿನ ಅನ್ವಯ ಉಪ್ಪಾರಪೇಟೆ ಠಾಣೆ ಪೊಲೀಸರು ಚಂದ್ರಶೇಖರ್ ಸ್ವಾಮೀಜಿ ವಿರುದ್ಧ ಎಫ್ಐಆರ್ ದಾಖಲಿಸಿ, ತನಿಖೆಗೆ ಮುಂದಾಗಿದ್ದಾರೆ. ಬಿಎನ್ಎಸ್ 299 ಅಡಿ ಎಫ್ಐಆರ್ ದಾಖಲು ಮಾಡಿದ್ದು, ಚಂದ್ರಶೇಖರ ಸ್ವಾಮೀಜಿಗೆ ನೋಟಿಸ್ ಜಾರಿ ಮಾಡಿದ್ದಾರೆ. ಡಿಸೆಂಬರ್ 2 ರಂದು ಪೊಲೀಸ್ ಠಾಣೆಗೆ ಖುದ್ದು ಹಾಜರಾಗುವಂತೆ ನೊಟೀಸ್‌ನಲ್ಲಿ ಸ್ವಾಮೀಜಿಗೆ ಸೂಚನೆ ನೀಡಿದ್ದಾರೆ.

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!